
ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾಗಿ ಶ್ರೀಹರ್ಷಗೌಡ ಪಾಟೀಲ, ಸಂಘಟನಾ ಕಾರ್ಯದರ್ಶಿ ದೀಪಕ ಶಿಂತ್ರೆ, ಪ್ರಧಾನ ಕಾರ್ಯದರ್ಶಿ ಪರಶುರಾಮ ಚಿಂಚಲಿ ಆಯ್ಕೆ
ಸಪ್ತಸಾಗರ ವಾರ್ತೆ, ವಿಜಯಪುರ, ಜು. 22:ಸಹಕಾರ ಭಾರತಿ ಕರ್ನಾಟಕ ನೂತನ ವಿಜಯಪುರ ಜಿಲ್ಲಾಧ್ಯಕ್ಷ ಶ್ರೀಹರ್ಷಗೌಡ ಪಾಟೀಲ, ಸಂಘಟನಾ ಕಾರ್ಯದರ್ಶಿ ದೀಪಕ ಶಿಂತ್ರೆ, ಪ್ರಧಾನ ಕಾರ್ಯದರ್ಶಿ ಪರಶುರಾಮ ಚಿಂಚಲಿ ಆಯ್ಕೆಯಾಗಿದ್ದು, ಜು. ೨೫ ರಂದು ನಗರದ ಭಾವಸರ ಸಾಂಸ್ಕೃತಿಕ ಭವನದಲ್ಲಿ ರಾಜ್ಯಾಧ್ಯಕ್ಷರಿಂದ ಪದಗ್ರಹಣ ಕಾರ್ಯಕ್ರಮ ನೆರವೇರುವುದು.ಆಯ್ಕೆಗೊಂಡ ನೂತನ ಜಿಲ್ಲಾಧ್ಯಕ್ಷರಿಂದ ಜಿಲ್ಲಾ ಕಾರ್ಯಕಾರಿ ಸದಸ್ಯರು, ತಾಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಿಳಾ ಮುಖ್ಯಸ್ಥರು ಮತ್ತು ವಿವಿಧ ಪ್ರಕೋಷ್ಟ ಅಧಿಕಾರಿಗಳ ಪದಗ್ರಹಣ ನೆರವೇರುವುದು.ಈ ಸಮಾರಂಭವನ್ನು ಸಂಸದ ರಮೇಶ ಜಿಗಜಿಣಗಿ ಅವರು ಉದ್ಘಾಟಿಸಲಿದ್ದು,…