ಹಾಲುಮತ ಸಮಾಜವನ್ನು ರಾಜಕೀಯಕ್ಕೆ ಎಳೆಯುವುದು ಖಂಡನೀಯ: ಸಂಗೀತಾ ದಿನ್ನಿ
ಸಪ್ತಸಾಗರ ವಾರ್ತೆ,ವಿಜಯಪುರ, ಆ. 18:ಮುದ್ದೇಬಿಹಾಳ ಶಾಸಕ ಸಿ.ಎಸ್. ನಾಡಗೌಡ ಅವರಿಗೆ ಸಚಿವ ಸ್ಥಾನ ಸಿಗದಿರುವ ಅಸಮಾಧಾನದಿಂದ ಹಾಲುಮತ ಸಮಾಜವನ್ನು ರಾಜಕೀಯಕ್ಕೆ ಎಳೆದು ತರುತ್ತಿರುವುದು ಖಂಡನೀಯ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸಂಗೀತಾ ದಿನ್ನಿ ಹೇಳಿದರು.ವಿಜಯಪುರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸಿಂಗ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಹಾಲುಮತ ಸಮಾಜದ ಮಹಿಳೆಯನ್ನು ಆಯ್ಕೆ ಮಾಡುವ ಕುರಿತು ಎಂ.ಬಿ. ಪಾಟೀಲ ಹಾಗೂ ಶಿವಾನಂದ ಪಾಟೀಲರು ಚರ್ಚಿಸಿ ನಿರ್ಧರಿಸಿದ್ದರು. ಅದರಂತೆ ತಮಗೆ ಜಿಲ್ಲೆಯ ಪ್ರಥಮ…


