ಮಕ್ಕಳ ಆರೋಗ್ಯವೇ ದೇಶದ ಪ್ರಗತಿಯ ಸಂಕೇತ: ಸಂತೋಷ ಬಂಡೆ

ಪೌಷ್ಟಿಕತೆ, ಸ್ವಾಸ್ಥ್ಯ, ಶುಚಿತ್ವ ಮಕ್ಕಳ ಬೆಳವಣಿಗೆಯ ಮೂರು ಸ್ತಂಭಗಳು ಸಪ್ತಸಾಗರ ವಾರ್ತೆ, ಇಂಡಿ, ಸೆ. 19:ಇಂದಿನ ಸ್ಪರ್ಧಾತ್ಮಕ ಹಾಗೂ ತಂತ್ರಜ್ಞಾನ ಆಧಾರಿತ ಜಗತ್ತಿನಲ್ಲಿ ಮಕ್ಕಳ ದೈಹಿಕ, ಮಾನಸಿಕ ಮತ್ತು ಸರ್ವಾಂಗೀಣ ಬೆಳವಣಿಗೆಗೆ ಪೌಷ್ಟಿಕತೆ, ಸ್ವಾಸ್ಥ್ಯ ಹಾಗೂ ಶುಚಿತ್ವ ಅತ್ಯಂತ ಅಗತ್ಯವಾಗಿವೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಸಂಭ್ರಮ ಶನಿವಾರದ ನಿಮಿತ್ತ ಹಮ್ಮಿಕೊಂಡಿದ್ದ ‘ಪೌಷ್ಟಿಕತೆ, ಸ್ವಾಸ್ಥ್ಯ ಮತ್ತು ನೈರ್ಮಲೀಕರಣ’ ವಿಷಯದ ಕುರಿತು ಅವರು ಮಾತನಾಡಿದರು.ಇಂದಿನ ಮಕ್ಕಳೇ ದೇಶದ ನಾಳಿನ ಪ್ರಜೆಗಳು. ಮಕ್ಕಳ…

Read More

ಸುರಕ್ಷಿತ ಅಂತರ್ಜಾಲ ಬಳಕೆಗೆ ಹೆಚ್ಚು ಗಮನ ನೀಡಿ: ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 21:ಅಂತರ್ಜಾಲವು ಮಕ್ಕಳ ಕಲಿಕೆಗೆ ಅಪಾರ ನೆರವು ನೀಡುತ್ತಿದ್ದರೂ, ಅದರ ನಿಯಂತ್ರಣವಿಲ್ಲದ ಬಳಕೆ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಹೀಗಾಗಿ ಪೋಷಕರು ಎಚ್ಚರ ವಹಿಸಿ ಮಕ್ಕಳಲ್ಲಿ ಸುರಕ್ಷಿತ ಅಂತರ್ಜಾಲ ಬಳಕೆಯ ಕುರಿತು ಅರಿವು ಮೂಡಿಸಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಶುಕ್ರವಾರ ಸಂಭ್ರಮ ಶುಕ್ರವಾರ ಹಾಗೂ ಬ್ಯಾಗ್‌ಲೆಸ್‌ ಡೇ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾಧ್ಯಮ ಮತ್ತು ಅಂತರ್ಜಾಲ ಬಳಕೆ ಕುರಿತು…

Read More

ವಿಶ್ವ ಶ್ರೇಷ್ಠ ಸಾಹಿತ್ಯದ ಅನರ್ಘ್ಯ ಪ್ರತಿಭೆ ಮಧುರಚೆನ್ನರು: ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಜು. 31: ಹಳ್ಳಿಯೊಂದರಲ್ಲಿ ಹುಟ್ಟಿ, ಸರಳ ಬದುಕಿನಲ್ಲೇ ಕನ್ನಡ ಸಾಹಿತ್ಯಕ್ಕೆ ಅಪೂರ್ವ ಕೊಡುಗೆ ನೀಡಿದ ಮಧುರಚೆನ್ನರು ವಿಶ್ವ ಶ್ರೇಷ್ಠ ಸಾಹಿತ್ಯವನ್ನು ರಚಿಸಿದ ಅನರ್ಘ್ಯ ಪ್ರತಿಭೆ ಎಂದು ಶಿಕ್ಷಕ-ಸಾಹಿತಿ ಸಂತೋಷ ಬಂಡೆ ಹೇಳಿದರು.ತಾಲೂಕಿನ ಹಿರೇರೂಗಿ ಗ್ರಾಮದ ಅರಿವು ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಮಧುರಚೆನ್ನರ 123ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಹಲಸಂಗಿ ಗೆಳೆಯರ ಬಳಗವನ್ನು ಕಟ್ಟಿಕೊಂಡು, ಗ್ರಾಮೀಣ ಮಹಿಳೆಯರು ಹಾಡುತ್ತಿದ್ದ ಜಾನಪದ ಗೀತೆಗಳನ್ನು ಸಂಗ್ರಹಿಸಿ ಪ್ರಕಟಿಸುವ ಮೂಲಕ ಮಧುರಚೆನ್ನರು ಕನ್ನಡ ಜಾನಪದ ಸಾಹಿತ್ಯಕ್ಕೆ ಅಮೂಲ್ಯ ಸೇವೆ…

Read More

ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಜು. 3: ಮಿತಿಮೀರಿದ ಪ್ಲಾಸ್ಟಿಕ್‌ ಬಳಕೆಯಿಂದ ಮನುಷ್ಯನ ಆರೋಗ್ಯ ಹದಗೆಡುತ್ತಿದೆ. ಮುಂದಿನ ತಲೆಮಾರಿಗೆ ವಿಷಮುಕ್ತ ಪರಿಸರ ನೀಡಲು ಇಂದೇ ಪ್ಲಾಸ್ಟಿಕ್ ತ್ಯಜಿಸಿ. ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶುಕ್ರವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಮುಕ್ತ ದಿನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ಲಾಸ್ಟಿಕ್ ಪರಿಸರಕ್ಕೆ ಮಾರಕವಾಗಿದ್ದು, ಭೂಮಿ, ಸಮುದ್ರ, ಜೀವಸಂಕುಲಕ್ಕೆ ಅಪಾಯವಾಗಿದೆ. ಅಂಗಡಿ, ಮಾರುಕಟ್ಟೆಗೆ ಹೋಗುವಾಗ ಮನೆಯಿಂದ ಬಟ್ಟೆ ಕೈಚೀಲ ತೆಗೆದುಕೊಂಡು ಹೋಗಬೇಕು….

Read More

ಪೋಲಿಯೋ ಹನಿ ಜೀವಮಾನದ ರಕ್ಷಕ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಜೂ. 27: ಪೋಲಿಯೋ ನಿರ್ಮೂಲನೆ ಪ್ರತಿಯೊಬ್ಬರ ಜವಾಬ್ದಾರಿ. ಲಸಿಕೆ, ಜಾಗೃತಿ ಮತ್ತು ಸ್ವಚ್ಛತೆಯ ಮೂಲಕ ನಾವು ಆರೋಗ್ಯಕರ ಸಮಾಜ ನಿರ್ಮಿಸಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶನಿವಾರ ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯ ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಂಡ ಪಲ್ಸ್ ಪೋಲಿಯೋ ಲಸಿಕೆಯ ಜಾಗೃತಿ ಜಾಥಾ ಉದ್ಧೇಶಿಸಿ ಅವರು ಮಾತನಾಡಿದರು.ಕೇವಲ ಎರಡು ಹನಿ ಪೋಲಿಯೊ ಲಸಿಕೆ ಮಗುವಿಗೆ ಜೀವಮಾನದ ರಕ್ಷಣೆ ನೀಡುತ್ತದೆ. ಭಾರತವನ್ನು…

Read More

ಕನಕದಾಸರ ಬದುಕು ನಮ್ಮೆಲ್ಲರ ಬದುಕಿಗೆ ಆದರ್ಶದ ಹೊತ್ತಿಗೆ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 15: ಕನಕದಾಸರ ಕೀರ್ತನೆಗಳು ಸಮಾನತೆ, ಮಾನವೀಯತೆ, ವೈಚಾರಿಕತೆಯ ಆಧಾರದ ಮೇಲೆ ಸ್ವಸ್ಥ ಸಮಾಜ ನಿರ್ಮಿಸುವ ಸಾಮಾಜಿಕ ಕಾಳಜಿ ಹೊಂದಿದ್ದು, ಅವು ಸಾಮಾಜಿಕ ಪರಿವರ್ತನೆಗೆ ದಾರಿದೀಪವಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ರವಿವಾರ ಸಂಜೆ ಶ್ರೀ ಕನಕದಾಸರ ಸಾಹಿತ್ಯ ಪ್ರಚಾರ ಸಮಿತಿ ವತಿಯಿಂದ ಹಮ್ಮಿಕೊಂಡ ರಾಜ್ಯ ಮಟ್ಟದ ಆನ್ ಲೈನ್ 116 ನೇ ಉಪನ್ಯಾಸದಲ್ಲಿ ‘ಕನಕದಾಸರ ಕೀರ್ತನೆಗಳಲ್ಲಿ ಸಾಮಾಜಿಕ ಮೌಲ್ಯಗಳು’ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು.ಕನಕದಾಸರ ಬದುಕು ನಮ್ಮೆಲ್ಲರ ಬದುಕಿಗೆ ಆದರ್ಶದ…

Read More

ಬಾಲ ಕಾರ್ಮಿಕ ಪದ್ಧತಿ ನಿವಾರಣೆಗೆ ಶಿಕ್ಷಣವೇ ಅಸ್ತ್ರ- ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, 12:ಮಕ್ಕಳು ದೇಶದ ಭವಿಷ್ಯದ ಆಸ್ತಿ. ಮಕ್ಕಳ ಕೈಯಲ್ಲಿ ಪುಸ್ತಕವಿರಬೇಕು, ದುಡಿಮೆಯ ಆಯುಧ ಅಲ್ಲ. ಪ್ರತಿ ಮಗುವಿಗೂ ಗುಣಮಟ್ಟದ ಶಿಕ್ಷಣ ಮತ್ತು ಸುರಕ್ಷಿತ ಬಾಲ್ಯವನ್ನು ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶುಕ್ರವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಬಾಲ ಕಾರ್ಮಿಕ ವಿರೋಧಿ ದಿನವನ್ನು ಉದ್ಧೇಶಿಸಿ ಅವರು ಮಾತನಾಡಿದರು.ಬಾಲ ಕಾರ್ಮಿಕ ಪದ್ಧತಿಯು ಮಕ್ಕಳ ಬಾಲ್ಯ, ಆರೋಗ್ಯ, ಶಿಕ್ಷಣ ಕಸಿದುಕೊಳ್ಳುವ ಸಾಮಾಜಿಕ ಪಿಡುಗು. ಅದು ದೇಶದ ಭವಿಷ್ಯಕ್ಕೆ ಮಾರಕ….

Read More

ಪುಸ್ತಕ ವ್ಯಕ್ತಿಯ ವ್ಯಕ್ತಿತ್ವ ರೂಪಿಸುವ ಜ್ಞಾನ ಭಂಡಾರ- ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಜೂ. 9: ಮೊಬೈಲ್ ಒಂದು ಸಂವಹನ ಸಾಧನ, ಆದರೆ ಪುಸ್ತಕ ವ್ಯಕ್ತಿಯ ವ್ಯಕ್ತಿತ್ವ ರೂಪಿಸುವ ಜ್ಞಾನ ಭಂಡಾರ.’ಮೊಬೈಲ್ ಬಿಡಿ-ಪುಸ್ತಕ ಹಿಡಿ’ ಇದು ಘೋಷಣೆ ಅಷ್ಟೇ ಅಲ್ಲ. ಬದಲಿಗೆ ಇಂದಿನ ಮಕ್ಕಳನ್ನು ರಕ್ಷಿಸುವ ಜೀವನಾಡಿಯಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಮಂಗಳವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ‘ಮೊಬೈಲ್ ಬಿಡಿ-ಪುಸ್ತಕ ಹಿಡಿ’ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪ್ರತಿಯೊಬ್ಬ ವಿದ್ಯಾರ್ಥಿಯು ಮೊಬೈಲ್‌ ಜಗತ್ತಿನಿಂದ ಹೊರಬಂದು, ನೈಜ ಜ್ಞಾನದ ಮೂಲವಾದ ಪುಸ್ತಕವನ್ನು ಹಿಡಿದಾಗ ಮಾತ್ರ…

Read More

ಪರಿಸರ ರಕ್ಷಣೆಗಾಗಿ ಪಣ ತೊಡೋಣ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಜೂ. 5: ಪ್ರಕೃತಿ ನಮಗೆ ಬದುಕಲು ಬೇಕಾದ ಗಾಳಿ, ನೀರು, ಆಹಾರ, ನೆರಳನ್ನು ನೀಡಿದೆ. ಪರಿಸರ ಹಾಳಾದರೆ ಮಾನವನ ಅಸ್ತಿತ್ವವೇ ಪ್ರಶ್ನಾರ್ಥಕವಾಗುತ್ತದೆ. “ಇಂದಿನ ಮರ, ನಾಳಿನ ಜೀವ” ಎಂಬ ಧ್ಯೇಯವಾಕ್ಯದೊಂದಿಗೆ ನಾವೆಲ್ಲರೂ ಪರಿಸರ ರಕ್ಷಣೆಗಾಗಿ ಪಣ ತೊಡೋಣ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶುಕ್ರವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಟ್ಟು ಅವರು ಮಾತನಾಡಿದರು.ಇಂದಿನ ಮಕ್ಕಳಿಗೆ ಪ್ರಕೃತಿಯ ಮಹತ್ವ ತಿಳಿಸಿಕೊಟ್ಟು, ಸ್ವಚ್ಛತೆಯ ಅಭ್ಯಾಸ ಕಲಿಸುವುದು…

Read More

ಮಯೂರವರ್ಮ ಕನ್ನಡದ ಸ್ವಾಭಿಮಾನದ ಸಂಕೇತ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 28:ಕನ್ನಡಿಗರ ಸಾಮೂಹಿಕ ಪ್ರಜ್ಞೆಯಲ್ಲಿ ‘ಅಸ್ಮಿತೆ’ಯ ಬೀಜ ಬಿತ್ತಿ, ಕನ್ನಡ ಭಾಷೆ, ನೆಲ, ಸಂಸ್ಕೃತಿಯ ಸಂಕೇತವಾದ ಮಯೂರವರ್ಮನ ಆದರ್ಶಗಳು ಇಂದಿನ ಜಾಗತೀಕರಣದಲ್ಲಿ ಕನ್ನಡ ಭಾಷೆ ಉಳಿಸಿ ಬೆಳೆಸುವಲ್ಲಿ ನಮಗೆ ದಾರಿದೀಪವಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಗುರುವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ೧೬೮೧ ನೇ ಕನ್ನಡ ಸಾಮ್ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಯೂರವರ್ಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕನ್ನಡಾಭಿಮಾನದ ಕುರಿತು ಅವರು ಮಾತನಾಡಿದರು.ಕದಂಬರ ಮಯೂರವರ್ಮನು ಕನ್ನಡದ…

Read More