ಸಾರವಾಡ ಗ್ರಾಮಕ್ಕೆ ನೂತನ ಎರಡು ಬಸ್ಸುಗಳ ಕಾರ್ಯಾರಂಭ

ಸಪ್ತಸಾಗರ ವಾರ್ತೆ ವಿಜಯಪುರ, ಆ. 27: ಬಬಲೇಶ್ವರ- ವಿಜಯಪುರ ಮತ್ತು ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಮಂಗಳವಾರದಿಂದ ಪ್ರಾರಂಭವಾಗಿದೆ.ಸಾರವಾಡ ಗ್ರಾಮಸ್ಥರ ಬೇಡಿಕೆ ಹಿನ್ನೆಲೆಯಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೀ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರು ಈ ಬಸ್ ಸೇವೆ ಪ್ರಾರಂಭಿಸುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ‌ ಈ ಬಸ್ ಸೇವೆ ಪ್ರಾರಂಭಿಸಿದೆ.ಮಂಗಳವಾರ ಬಬಲೇಶ್ವರ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಳೆ…

Read More

ಸಾರವಾಡಕ್ಕೆ ಎಲ್ಲ ಬಸ್‌ಗಳ ನಿಲುಗಡೆಗೆ ಕ್ರಮ: ಗ್ರಾಮಸ್ಥರಿಂದ ಹರ್ಷ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 25 : ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ, ವಾಯವ್ಯ ಕರ್ನಾಟಕ ಸಾರಿಗೆ ಬಸ್‌ಗಳ ನಿಲುಗಡೆಗೆ ಆಗ್ರಹಿಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೆ ಅನುಕೂಲ ಕಲ್ಪಿಸಲು ಕಳೆದ ಆಗಸ್ಟ್ 14 ರಂದು ಗ್ರಾಮಸ್ಥರು ಮೂರು ಗಂಟೆಗಳ ಕಾಲ ಸಾರವಾಡ ಗ್ರಾಮದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬಸ್‌ ನಿಲುಗಡೆಗೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಲಿಖಿತ ಭರವಸೆ ನೀಡಿದ್ದರು. ಭರವಸೆ ಈಡೇರಿಸಲು ವಿಫಲವಾದ ಹಿನ್ನೆಲೆಯಲ್ಲಿ ಆಗಷ್ಟೇ 26…

Read More

ಸಾರವಾಡ ಗ್ರಾಮಕ್ಕೆ ಕಡ್ಡಾಯವಾಗಿ ಬಸ್ ನಿಲುಗಡೆಗೆ ಆದೇಶ

ಸಪ್ತ ಸಾಗರ ವಾರ್ತೆ ವಿಜಯಪುರ, ಆ. 24:ವಿಜಯಪುರ-ಬಬಲೇಶ್ವರ ಮಾರ್ಗದಲ್ಲಿ ಬರುವ ಸಾರವಾಡ ಗ್ರಾಮಕ್ಕೆ ಸಾಮಾನ್ಯ, ವೇಗದೂತ ಸಾರಿಗೆಗಳನ್ನು ಕಡ್ಡಾಯವಾಗಿ ನಿಲುಗಡೆ ನೀಡಿ ಕಾರ್ಯಾಚರಣೆ ಮಾಡುವ ಕುರಿತು ಮೇಲಾಧಿಕಾರಿಗಳು ಆದೇಶ ನೀಡಿದ್ದಾರೆ .ಸಾರವಾಡ ಗ್ರಾಮ ಪಂಚಾಯತಿ ಅಧ್ಯಕ್ಷರ ಮನವಿ ಪತ್ರದ ಮೂಲಕ ಸಾರವಾಡ ಗ್ರಾಮಕ್ಕೆ ಸಾಮಾನ್ಯ ಹಾಗೂ ವೇಗದೂತ ಬಸ್ ಗಳ ನಿಲುಗಡೆ ಮಾಡುವಂತೆ ಮೇಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಈಗಾಗಲೇ ಈ ಬಗ್ಗೆ ಮೇಲಾಧಿಕಾರಿಗಳು ಆದೇಶ ನೀಡಿದ್ದರೂ ಚಾಲಕರು ಹಾಗೂ ನಿರ್ವಾಹಕರು ಸಾರವಾಡ ಗ್ರಾಮಕ್ಕೆ ಬಸ್ ನಿಲುಗಡೆ ಮಾಡದೆ…

Read More

ನಾಳೆಯಿಂದ ಸಾರವಾಡದಲ್ಲಿಈಶ್ವರ ಹಾಗೂ ಮಾರುತಿ ದೇವರ ಜಾತ್ರೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.13 :ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಶ್ರೀ ಈಶ್ವರ ಹಾಗೂ ಶ್ರೀ ಮಾರುತಿ ದೇವರ ಜಾತ್ರಾ ಮಹೋತ್ಸವವು ಇದೇ ದಿ.೧೪ ರಿಂದ ಐದು ದಿನಗಳವರೆಗೆ ವಿಜೃಂಭಣೆಯಿಂದ ಜರುಗಲಿದೆ.ಜಾತ್ರೆಯ ಅಂಗವಾಗಿ ವಿವಿಧ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ದಿ.14 ರಂದು ವಿವಿಧ ವಾದ್ಯ ಮೇಳ ಜಾಗೂ ಪಲ್ಲಕ್ಕಿ ಉತ್ಸವದೊಂದಿಗೆ ಕುಲಕರ್ಣಿ ಅವರ ಮನೆಯಿಂದ ಮಾರುತಿ ದೇವರ ಉತ್ಸವ ಮೂರ್ತಿಯನ್ನು ಮಾರುತಿ ದೇವಸ್ಥಾನಕ್ಕೆ ತಂದು ಬಳಿಕ ಓಕಳಿ ಕಂಬ ನಿಲ್ಲಿಸುವುದರೊಂದಿಗೆ ಜಾತ್ರೆಗೆ ವಿದ್ಯುಕ್ತವಾಗಿ ಚಾಲನೆ…

Read More