ಗ್ರಂಥಾಲಯಕ್ಕೆ ನಿವೇಶನ ಪಡೆದು ಸುಸಜ್ಜಿತ ಕಟ್ಟಡ ನಿರ್ಮಿಸಿ
ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳಿದ್ದಂತೆ: ಎಂ.ಎಸ್. ಕರಡಿ ಸಪ್ತಸಾಗರ ವಾರ್ತೆ,ವಿಜಯಪುರ, ಆ. 18 :ಮಹಾನಗರ ವ್ಯಾಪ್ತಿಯ ಪ್ರತಿ ವಾರ್ಡ್‌ನಲ್ಲಿ ಗ್ರಂಥಾಲಯ ಕಟ್ಟಡ ನಿರ್ಮಿಸಲು ಅಗತ್ಯವಿರುವ ನಿವೇಶನವನ್ನು ಪಡೆದು, ಸುಸಜ್ಜಿತ ಗ್ರಂಥಾಲಯಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಮಹಾನಗರ ಪಾಲಿಕೆ ಮಹಾಪೌರ ಎಂ.ಎಸ್. ಕರಡಿ ಸೂಚಿಸಿದರು.ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ನಡೆದ ನಗರ ಗ್ರಂಥಾಲಯ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಗರ ಕೇಂದ್ರ ಗ್ರಂಥಾಲಯದ ಆವರಣದಲ್ಲಿರುವ ಖಾಲಿ ನಿವೇಶನದಲ್ಲಿ…


