ಪತ್ರಕರ್ತರ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಹಿರಿಯ ಪತ್ರಕರ್ತರ ವೇದಿಕೆ ಖಂಡನೆ
ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಳ್ಳಲು ಆಗ್ರಹ ಸಪ್ತಸಾಗರ ವಾರ್ತೆ, ಬೆಂಗಳೂರು, ಅ. 18:ದೆಹಲಿಯಲ್ಲಿ ಪ್ರತಿಭಟನೆಗಳ ವರದಿ ಮಾಡುತ್ತಿದ್ದ ಪತ್ರಕರ್ತರು, ಮಹಿಳಾ ಪತ್ರಕರ್ತೆಯರು ಸೇರಿದಂತೆ ಮಾಧ್ಯಮ ಪ್ರತಿನಿಧಿಗಳ ಮೇಲೆ ಭದ್ರತಾ ಸಿಬ್ಬಂದಿ ನಡೆಸಿದ ಹಲ್ಲೆ, ಬಲಪ್ರಯೋಗ ಹಾಗೂ ಬಂಧನ ಕ್ರಮವನ್ನು ಬೆಂಗಳೂರಿನ ಹಿರಿಯ ಪತ್ರಕರ್ತರ ವೇದಿಕೆ ತೀವ್ರವಾಗಿ ಖಂಡಿಸಿದೆ.ಪತ್ರಕರ್ತರ ವೃತ್ತಿಪರ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದು ಪತ್ರಿಕಾ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಹಸ್ತಕ್ಷೇಪ ಎಂದು ವೇದಿಕೆ ಆಕ್ಷೇಪಿಸಿದೆ.ಬೆಂಗಳೂರಿನಲ್ಲಿ ಇಂದು ನಡೆದ ವೇದಿಕೆಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ…


