
ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ
ಸಪ್ತಸಾಗರ ವಾರ್ತೆ, ವಿಜಯಪುರ, ಜು. 10:ನಗರದ ಶಾಂತಿನಿಕೇತನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ ಜರುಗಿತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪರಮ ಪೂಜ್ಯ ಶ್ರೀ ಪ್ರಭಾಕರ ಮಠ (ತದ್ದೇವಾಡಿ) ಇವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರು ವ್ಯಾಸ ಮಹರ್ಷಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಆಶೀರ್ವಚನ ನೀಡುತ್ತಾ ಗುರು ಬ್ರಹ್ಮ-ವಿಷ್ಣು- ಮಹೇಶ್ವರರ ಸ್ವರೂಪನಾಗಿದ್ದಾನೆ. ಗುರು ಅಂಧಕಾರದಿಂದ ನಮ್ಮನ್ನು ಬೆಳಕಿನಡೆಗೆ ಕರೆದುಕೊಂಡು ಹೋಗುತ್ತಾರೆ. ಗುರು ನಮಗೆ ಒಳ್ಳೆಯ ಮಾರ್ಗದರ್ಶನ ನೀಡಿ, ಸತ್ಯದ ಕಡೆ…