
ಮಿಶ್ರ- ಸಮಗ್ರ ಕೃಷಿಯಿಂದ ರೈತರಿಗೆ ಲಾಭ -ಸಚಿವ ಶಿವಾನಂದ ಪಾಟೀಲ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 22 : ರೈತರು ಕೃಷಿ ಆಧಾರಿತ ವ್ಯವಸ್ಥೆಯಲ್ಲಿ ಲಾಭ ಗಳಿಸಿ, ಆರ್ಥಿಕವಾಗಿ ಸುಭದ್ರವಾಗಬೇಕಿದೆ. ಆದರೆ ತೋಟಗಾರಿಕೆ ಬೆಳೆಯಲ್ಲಿ ಏಕ ಬೆಳೆಯಾಗಿ ದ್ರಾಕ್ಷಿ ಬೆಳೆಯದೇ ಮಿಶ್ರ ಬೆಳೆ ಹಾಗೂ ಸಮಗ್ರ ಕೃಷಿಯಲ್ಲಿ ಮಾಡಿದಲ್ಲಿ ಯಶಸ್ಸು ಸಾಧ್ಯ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸಲಹೆ ನೀಡಿದರು.ಭಾನುವಾರ ತಿಕೋಟಾ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಸಂಘದಿಂದ ಹಮ್ಮಿಕೊಂಡಿದ್ದ ದ್ರಾಕ್ಷಿ ಬೆಳೆಗಾರರ ರಾಷ್ಟ್ರೀಯ ವಿಚಾರ ಸಂಕಿರಣ…