ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮುಳವಾಡ ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ, ಸದಸ್ಯರು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15 :ಜಿಲ್ಲೆಯ ಬಸವನ ಬಾಗೇವಾಡಿ ವಿಧಾನಸಭೆ ವ್ಯಾಪ್ತಿಯ ಮುಳವಾಡ ಗ್ರಾಮ ಪಂಚಾಯತಿ ಅಧ್ಯಕ್ಷ- ಉಪಾಧ್ಯಕ್ಷ ಸೇರಿದಂತೆ 6 ಸದಸ್ಯರು ಬಿಜೆಪಿ ತೊರೆದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ವಿಜಯಪುರ ನಗರದಲ್ಲಿರುವ ಸಚಿವ ಶಿವಾನಂದ ಪಾಟೀಲ ಅವರ ಗೃಹ ಕಛೇರಿಗೆ ಆಗಮಿಸಿದ ಮುಳವಾಡ ಗ್ರಾಮ ಪಂಚಾಯತಿ ಬಿಜೆಪಿ ಸದಸ್ಯರು ಅಧ್ಯಕ್ಷ ಬಾಳು ಚಿನಕೇಕರ, ಉಪಾಧ್ಯಕ್ಷೆ ಮಧುಮತಿ ಧನ್ಯಾಳ, ಗ್ರಾಮ ಪಂಚಾಯತಿ…

Read More

ನಮ್ಮದು ಅಭಿವೃದ್ಧಿ ಪರ ಸರ್ಕಾರ: ಸಿದ್ದರಾಮಯ್ಯ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಭಾಗಿ

ಸಪ್ತಸಾಗರ ವಾರ್ತೆ, ಜು. 14:ನಮ್ಮದು ಅಭಿವೃದ್ಧಿಪರ ಸರ್ಕಾರ. ಬಿಜೆಪಿ ಅಪಪ್ರಚಾರಕ್ಕೆ ಅಭಿವೃದ್ಧಿ ಮೂಲಕವೇ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಸೋಮವಾರ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ, ಲಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.4157…

Read More

ಸರೋಜಾದೇವಿ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಕಂಬನಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 14:ಕನ್ನಡ ಚಿತ್ರರಂಗದ ಮೇರು ನಟಿ ಬಿ.ಸರೋಜಾದೇವಿ ನಿಧನಕ್ಕೆ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಈ ಕುರಿತು ಸಂತಾಪ ಸಂದೇಶ ನೀಡಿರುವ ಸಚಿವರು, ಭಾರತೀಯ ಚಿತ್ರರಂಗದಲ್ಲಿ ಬಹುಭಾಷಾ ತಾರೆಯಾಗಿ ಕನ್ನಡದ ಕೀರ್ತಿ ಹೆಚ್ಚಿಸಿದ್ದ ಸರೋಜಾದೇವಿ ಅವರು, ಕನ್ನಡ ಚಿತ್ರರಂಗಕ್ಕೆ ಮಹೋನ್ನತ ಕೊಡುಗೆ ನೀಡಿದ್ದರು ಎಂದು ಸ್ಮರಿಸಿದ್ದಾರೆ.ಸರೋಜಾದೇವಿ ಅವರು ಮನೋಜ್ಞ ಅಭಿನಯ ನೀಡಿದ್ದ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಪಾತ್ರಕ್ಕೆ ಜೀವತುಂಬಿದ್ದನ್ನು…

Read More

ಕಲಬುರಗಿ ಎಪಿಎಂಸಿ ಕೃಷಿ ಉತ್ಪನ್ನೇತರ ಅಂಗಡಿ ತೆರವಿಗೆ ಸಚಿವರಿಗೆ ಮನವಿಧರಣಿ ಹೋರಾಟ ಕೈಬಿಡುವಂತೆ ಮನವೊಲಿಸಿದ ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 11 :ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಕೃಷಿ ಉತ್ಪನ್ನ ವಹಿವಾಟಿನ‌ ಹೊರತಾದ ಅಂಗಡಿಗಳ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನಿಯೋಗ ಕೃಷಿ ಮಾರುಕಟ್ಟೆ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅವರಿಗೆ ಮನವಿ ಸಲ್ಲಿಸಿತು.ಶುಕ್ರವಾರ ಸಚಿವರ ತವರು ಕ್ಷೇತ್ರದ ಬಸವನಬಾಗೇವಾಡಿ ಪಟ್ಟಣದಲ್ಲಿ ಸಂಘಟನೆಯ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ನೇತೃತ್ವದ ನಿಯೋಗದಲ್ಲಿ ಬಂದು ಸಚಿವ ಶಿವಾನಂದ ಪಾಟೀಲ ಅವರನ್ನು…

Read More

ವಿಜಯಪುರ ಕಾನಿಪ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ,11: ಜಿಲ್ಲೆಯಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಷ್ಕಾರ, ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪತ್ರಿಕಾ ದಿನಾಚರಣೆ ಜು. 19ರಂದು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವಂತೆ ಸಚಿವ ಶಿವಾನಂದ ಪಾಟೀಲ, ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಕಾನಿಪ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರನ್ನು ಆವ್ಹಾನಿಸಲು ಜಿಲ್ಲೆಯ ಕಾನಿಪ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರರ್ಣಿ, ರಾಜ್ಯ ಕಾರ್ಯಕಾರಿ ನಾಮನಿರ್ದೇಶನ ಸದಸ್ಯ ಕೆ.ಕೆ.ಕುಲಕರ್ಣಿ ಹಾಗೂ ಜಿಲ್ಲಾ ಖಜಾಂಚಿ ರಾಹುಲ್ ಆಪ್ಟೆ ಅವರು…

Read More