
ಶಿವಶರಣ ಹಡಪದ ಅಪ್ಪಣ್ಣನವರ ಕೊಡುಗೆ ಅನನ್ಯ: ಎಂ.ಬಿ. ಪಾಟೀಲ್
ಸಪ್ತಸಾಗರ ವಾರ್ತೆ, ವಿಜಯಪುರ, ಆ. 10: ಅಣ್ಣ ಬಸವಣ್ಣನವರ ಪರಮಾಪ್ತರಾಗಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರು ಅನೇಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ನೆರವಾಗುವ ಮೂಲಕ ಸಮಾಜ ಸುಧಾರಣೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದಲ್ಲಿ ದುರ್ಗಾದೇವಿ ದೇವಸ್ಥಾನದ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ…