‘ಸಾಕ್ಷಿ’ ಕಿರುಚಿತ್ರದ ಚಿತ್ರೀಕರಣ ಮುಕ್ತಾಯ
ಸಪ್ತಸಾಗರ ವಾರ್ತೆ,ಬೆಂಗಳೂರು, ಸೆ. 7: ಕಲಾಪೋಷಕರ ಮಠ ಸುಕ್ಷೇತ್ರ ಸಿದ್ದನಕೊಳ್ಳದ ಪೂಜ್ಯ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಕೀರ್ತನ ಮೂವೀ ಮೇಕರ್ಸ್ ವತಿಯಿಂದ ನಿರ್ಮಾಣವಾಗುತ್ತಿರುವ ‘ಸಾಕ್ಷಿ’ ಕಿರುಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಸಂಕಲನ ಕಾರ್ಯ ಆರಂಭವಾಗಿದೆ.ಕೊಲೆ ರಹಸ್ಯವನ್ನು ಭೇದಿಸುವ ರೋಚಕ ಕಥಾಹಂದರ ಹೊಂದಿರುವ ಈ ಕಿರುಚಿತ್ರದ ಚಿತ್ರೀಕರಣವನ್ನು ಬೆಂಗಳೂರಿನ ವಿವಿಧೆಡೆ ಐದು ದಿನಗಳ ಕಾಲ ನಡೆಸಲಾಗಿದೆ. ನಿರ್ದೇಶಕ ಲೋಕೇಶ್ ವಿದ್ಯಾಧರ ಅವರ ಹಿಂದಿನ ‘ಒಬ್ಬಟ್ಟು’ ಸಸ್ಪೆನ್ಸ್, ಥ್ರಿಲ್ಲರ್ ಹಾಸ್ಯಕಥೆಯ ಚಿತ್ರ ಬಿಡುಗಡೆಯಾಗಿದ್ದು, ಇದೀಗ ಅವರ ನಿರ್ದೇಶನದ ಎರಡನೇ…


