ನಾಳೆಯಿಂದ ವೈಭವದ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 10: ಉತ್ತರ ಕರ್ನಾಟಕದ ಸುಪ್ರಸಿದ್ದ ಶ್ರೀ ಸಿದ್ದೇಶ್ವರ ಸಂಕ್ರಮಣ ಜಾತ್ರಾ ಮಹೋತ್ಸವ ಜನವರಿ 11ರಿಂದ 7 ದಿನಗಳ ಕಾಲ ವೈಭವದಿಂದ ನಡೆಯಲಿದ್ದು, ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಪೂರ್ಣಗೊಳಿಸಲಾಗಿದೆ ಎಂದರು.ಜಾತ್ರಾ ಮಹೋತ್ಸವ ಅಂಗವಾಗಿ ನಡೆಯುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತು ನಗರ ಶಾಸಕ ಹಾಗೂ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ಹಾಗೂ ಶ್ರೀ ಸಿದ್ದೇಶ್ವರ ಸಂಸ್ಥೆಯ ಸರ್ವ ನಿರ್ದೇಶಕರ ಸಮ್ಮುಖದಲ್ಲಿ ಚೇರಮನ್ ಬಸಯ್ಯ ಹಿರೇಮಠ…


