
ಸೋನಿಯಾ ಗಾಂಧಿ ಅಣತಿಯಂತೆ ಜಾತಿ ಗಣತಿ: ಯತ್ನಾಳ ಟೀಕೆ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20:ರಾಜ್ಯ ಸರ್ಕಾರದ ಜಾತಿ ಗಣತಿ ಸೋನಿಯಾ ಗಾಂಧಿ ಅಣತಿಯಂತೆ ನಡೆಯುತ್ತಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆರೋಪ ಮಾಡಿದ್ದಾರೆ.ವಿಜಯಪುರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಯತ್ನಾಳ,ಕ್ರಿಶ್ಚಿಯನ್ ಕುರುಬ, ಕ್ರಿಶ್ಚಿಯನ್ ಲಿಂಗಾಯತ, ಕ್ರಿಶ್ಚಿಯನ್ ಒಕ್ಕಲಿಗ ಮಾಡಿದ್ದಾರೆ. ಇವೆಲ್ಲ ಸೋನಿಯಾ ಗಾಂಧಿ ಕೊಟ್ಟಿರುವ ಹೊಸ ಹೊಸ ನಾಮಾವಳಿ ಎಂದರು.ಕೆಲವರು ಕ್ರಿಶ್ಚಿಯನ್ ರಾಷ್ಟ್ರ, ಹಲವರು ಮುಸ್ಲಿಂ ರಾಷ್ಟ್ರ ಮಾಡಬೇಕೆನ್ನುತ್ತಾರೆ.ಈ ಹಿನ್ನಲೆ ಜಾತಿ ವರ್ಗೀಕರಣ ಮಾಡಿದ್ದಾರೆ. ಇವೆಲ್ಲಾ ಜಾತಿಗಳು ನಮ್ಮ ದೇಶದಲ್ಲಿ ಅಷ್ಟೇ…