ಸಿಂದಗಿ, ಇಂಡಿ ಪ್ರವಾಹಪೀಡಿತ ಸ್ಥಳಗಳಿಗೆ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 28:ಯಾರೂ ಭಯಪಡುವ ಅವಶ್ಯಕತೆ ಇಲ್ಲ, ಸರ್ಕಾರ-ಜಿಲ್ಲಾಡಳಿತ ನಿಮ್ಮೊಂದಿಗಿದೆ. ನಿಮ್ಮ ಸಮಸ್ಯೆಗಳಿಗೆ ಸದಾ ಸ್ಪಂದಿಸಿ, ಪರಿಹಾರ ಕಲ್ಪಿಸಲಿದೆ. ಪ್ರವಾಹದಿಂದ ಹಾನಿಗೊಳಗಾದ ಬೆಳೆ ನಾಶ- ಮನೆ ಹಾನಿಯನ್ನು ಸಂಪೂರ್ಣವಾಗಿ-ಸಮಗ್ರವಾಗಿ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ತಿಳಿಸಿದರು.ಪ್ರವಾಹ ಪೀಡಿತ ಜಿಲ್ಲೆಯ ಸಿಂದಗಿ ಹಾಗೂ ಇಂಡಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭಾನುವಾರ ಭೇಟಿ ನೀಡಿ ಪರಿಶೀಲನೆ…

Read More

ಸಿಂದಗಿ: ಪ್ರವಾಹ‌ ಪೀಡಿತ ಸ್ಥಳಗಳಿಗೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಭೇಟಿ: ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ ಸಚಿವರು

ಸಪ್ತಸಾಗರ ವಾರ್ತೆ ವಿಜಯಪುರ, ಸೆ.28:ದೇವರನಾವದಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಮಸಗಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.ಕಾಳಜಿ ಕೇಂದ್ರಗಳಲ್ಲಿ ಕಲ್ಪಿಸಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದ ಅವರು,ಅಲ್ಲಿನ ಸಂತ್ರಸ್ಥರೊಂದಿಗೆ ಮಾತನಾಡಿ, ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ.ಯಾರು ಸಹ ಭಯ ಪಡುವ ಅವಶ್ಯಕತೆ ಇಲ್ಲ. ಜಿಲ್ಲಾಡಳಿತ ನಿಮ್ಮ ಜೊತೆಗಿದ್ದು, ಪ್ರವಾಹ…

Read More

ಸಿಂದಗಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಒಂದೇ ದಿನ ನಾಲ್ಕು ಬಾರಿ ಭೂಕಂಪನ: ಜನರಲ್ಲಿ ಆತಂಕ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 19:ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಜನರಿಗೆ ಒಂದೇ ದಿನ ನಾಲ್ಕು ಬಾರಿ ಭೂಕಂಪನ ಸಂಭವಿಸಿದ ಅನುಭವವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.ಜಿಲ್ಲೆಯ ಸಿಂದಗಿ ಪಟ್ಟಣದ ಸುತ್ತಮುತ್ತ ಒಂದೇ ದಿನ ನಾಲ್ಕು ಬಾರಿ ಭೂಮಿ ಕಂಪನದ ಅನುಭವವಾಗಿದೆ ಎಂದು ಜನರು ತಿಳಿಸಿದ್ದಾರೆ.ನಿನ್ನೆ ಮಧ್ಯಾಹ್ನ 3 ಗಂಟೆ, ರಾತ್ರಿ 10 ಗಂಟೆ 11ನಿಮಿಷ, ಮತ್ತೆ ರಾತ್ರಿ 10.25, ಮತ್ತೊಮ್ಮೆ 10.47 ಒಟ್ಟು 4 ಬಾರಿ ಭೂಮಿ ಕಂಪನಿಸಿದ ಅನುಭವವಾಗಿದೆ ಎಂದು ಜನರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.ಜೋರಾದ…

Read More

ಬಸ್ ಪಲ್ಟಿ: ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 4: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಹಲವರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಮನ್ನಾಪುರ ಬಳಿ ಸೋಮವಾರ ಸಂಭವಿಸಿದೆ.ಸಿಂದಗಿಯಿಂದ ಹೊನ್ನಳ್ಳಿಗೆ ತೆರಳುತ್ತಿದ್ದ ಬಸ್ ಹದಗೆಟ್ಟ ರಸ್ತೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣ ಹಾನಿಯಾಗಿಲ್ಲ. ಬಸ್‌ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಗಾಯಾಳುಗಳನ್ನು ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಸಿಂದಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More