ಕರ್ನಾಟಕದಲ್ಲಿ ವ್ಯಾಪಾರ, ಬಂಡವಾಳ ಹೂಡಿಕೆಗೆ ಸಿಂಗಾಪುರ ಉತ್ಸುಕ: ಡಿಸಿಎಂ ಡಿ.ಕೆ. ಶಿವಕುಮಾರ್
ಸಪ್ತಸಾಗರ ವಾರ್ತೆ, ಬೆಂಗಳೂರು, ನ.12:ಬೆಂಗಳೂರಿನಲ್ಲಿ ಸಿಂಗಪುರ ದೇಶವು ವ್ಯಾಪಾರ ವಹಿವಾಟು ನಡೆಸಲು ಹೆಚ್ಚು ಉತ್ಸುಕವಾಗಿದೆ. ತಂತ್ರಜ್ಞಾನ ಹಂಚಿಕೊಳ್ಳುವಿಕೆ ಸೇರಿದಂತೆ ಕೈಗಾರಿಕಾ ಪಾರ್ಕ್ ಆರಂಭಿಸುವ ಬಗ್ಗೆ ಸಿಂಗಾಪುರ ವಿದೇಶಾಂಗ ಸಚಿವರು ಚರ್ಚೆ ನಡೆಸಿದರು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸಿಂಗಾಪುರ ವಿದೇಶಾಂಗ, ವಾಣಿಜ್ಯ ಮತ್ತು ಕೈಗಾರಿಕೆ ಸಚಿವೆ ಗಾನ್ ಶಿಯೋ ಹುಯಂಗ್ ಅವರ ನೇತೃತ್ವದ ಸಿಂಗಾಪುರ ಸರಕಾರದ ನಿಯೋಗದ ಜೊತೆ ಚರ್ಚೆ ನಡೆಸಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.ಕಳೆದ ವರ್ಷ…


