ಎಸ್‌ಐಆರ್‌ ಪ್ರಕ್ರಿಯೆ ಸ್ಥಗಿತಕ್ಕೆ ಆಗ್ರಹಿಸಿ ಅ.16ರಂದು ಪ್ರತಿಭಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 14:ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಸ್ಥಗಿತಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಾ. ಡಿ.ಜಿ. ಸಾಗರ ಬಣ) ನೇತೃತ್ವದಲ್ಲಿ ಅ.16ರಂದು ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣನವರ ತಿಳಿಸಿದ್ದಾರೆ.ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು ಹಾಗೂ ಎಸ್‌ಐಆರ್‌ ಪ್ರಕ್ರಿಯೆಯನ್ನು ತಕ್ಷಣ…

Read More

ಎಸ್‌ಐಆರ್‌: ಡೇಟಾ ಸಮೇತ ಫಾರಂ-7 ಬಲ್ಕ್ ಸಲ್ಲಿಕೆ ಆರೋಪ

ನಿಯಮಾನುಸಾರ ಆಕ್ಷೇಪಣೆ ಸಲ್ಲಿಕೆಯಾಗಬೇಕು: ಎಂ.ಬಿ. ಪಾಟೀಲ್ ಸಪ್ತಸಾಗರ ವಾರ್ತೆ,ವಿಜಯಪುರ, ಅ. 3:ಎಸ್‌ಐಆರ್‌ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ಮತದಾರರ ವಿವರಗಳನ್ನು ಒಳಗೊಂಡ ಫಾರಂ ನಂಬರ್‌-7 ಅನ್ನು ದೊಡ್ಡ ಪ್ರಮಾಣದಲ್ಲಿ ಸಿದ್ಧಪಡಿಸಿ ಆಕ್ಷೇಪಣಾ ಅರ್ಜಿಗಳನ್ನು ಸಲ್ಲಿಸಲಾಗುತ್ತಿದೆ ಎಂದು ಕೈಗಾರಿಕಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಆರೋಪಿಸಿದ್ದಾರೆ.ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಫಾರಂ ನಂಬರ್‌-7ರಲ್ಲಿ ಮತದಾರರ ಹೆಸರು, ವಿಳಾಸ, ಮೊಬೈಲ್‌ ಸಂಖ್ಯೆ ಹಾಗೂ ಎಪಿಕ್‌ ನಂಬರ್‌ ಸೇರಿದಂತೆ ವಿವಿಧ ವಿವರಗಳು ಟೈಪ್‌ ಆಗಿರುವುದು ಕಂಡುಬರುತ್ತಿದೆ. ಇಂತಹ…

Read More

“ಎಸ್‌ಐಆರ್ ಹೆಸರಿನಲ್ಲಿ ಮತ ಕಳ್ಳತನಕ್ಕೆ ಅವಕಾಶವಿಲ್ಲ”

ವಿಜಯಪುರ ನಗರದಲ್ಲಿ 13 ಸಾವಿರ, ಬಬಲೇಶ್ವರದಲ್ಲಿ 1,372 ಆಕ್ಷೇಪಣೆ: ಎಂ.ಬಿ. ಪಾಟೀಲ ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 28: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹೆಸರಿನಲ್ಲಿ ಅರ್ಹ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನಕ್ಕೆ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಎಚ್ಚರಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 13 ಸಾವಿರ ಹಾಗೂ ಬಬಲೇಶ್ವರ ಕ್ಷೇತ್ರದಲ್ಲಿ 1,372 ಆಕ್ಷೇಪಣಾ ಅರ್ಜಿಗಳು ಸಲ್ಲಿಕೆಯಾಗಿರುವುದು ಹಲವು…

Read More

ಮತದಾರರ ಹಕ್ಕುಗಳ ಪರಿಶೋಧನೆಗೆ ವಿಜಯಪುರಕ್ಕೆ ಪ್ರಕಾಶ್ ರಾಜ್

ಸೆ. 22ರಂದು ‘SIR ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’; ಮತದಾರರ ಸಮಸ್ಯೆಗಳ ಕುರಿತು ಚರ್ಚೆ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 21:ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಎದುರಾಗಿರುವ ಲೋಪದೋಷಗಳು, ಮತದಾರರ ಹಕ್ಕುಗಳು ಹಾಗೂ ಸಾರ್ವಜನಿಕರ ಅಹವಾಲುಗಳನ್ನು ಪರಿಶೀಲಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ‘SIR ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’ದ ಭಾಗವಾಗಿ ಖ್ಯಾತ ಚಲನಚಿತ್ರ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಅವರು ಸೆ. 22ರಂದು ವಿಜಯಪುರಕ್ಕೆ ಆಗಮಿಸಲಿದ್ದಾರೆ.ಮತದಾರರ ಪಟ್ಟಿಯಲ್ಲಿನ ಸಮಸ್ಯೆಗಳನ್ನು ಗುರುತಿಸಿ, ಸಾರ್ವಜನಿಕರ…

Read More

ಎಸ್‌ಐಆರ್ ಹಾಗೂ ಬಿಎಲ್‌ಎ-2 ಕುರಿತು ಬಿಜೆಪಿ ಸಭೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ಭಾರತೀಯ ಜನತಾ ಪಕ್ಷದ ವಿಜಯಪುರ ಮಹಾನಗರ ಘಟಕದ ವತಿಯಿಂದ ವಾರ್ಡ್ ಸಂಖ್ಯೆ 21, 22, 23, 24 ಹಾಗೂ 25ರ ವ್ಯಾಪ್ತಿಯ ಶ್ರೀ ಸಾಕ್ಷಿ ಗಣಪತಿ ದೇವಸ್ಥಾನದಲ್ಲಿ ಅಟಲ್ ಬಿಹಾರಿ ವಾಜಪೇಯಿ ಮಹಾಶಕ್ತಿ ಕೇಂದ್ರ–04ರ ಆಶ್ರಯದಲ್ಲಿ ಎಸ್‌ಐಆರ್ ಹಾಗೂ ಬಿಎಲ್‌ಎ-2 ಕುರಿತ ಮಹತ್ವದ ಸಭೆ ನಡೆಯಿತು. ರಾಜ್ಯದಲ್ಲಿ ಪಕ್ಷವು ಎಸ್‌ಐಆರ್ ಅಭಿಯಾನ ಹಾಗೂ ಬಿಎಲ್‌ಎ-2 ಕಾರ್ಯವನ್ನು ಸಂಘಟನಾತ್ಮಕವಾಗಿ ಬಲಪಡಿಸುತ್ತಿರುವ ಹಿನ್ನೆಲೆಯಲ್ಲಿ ಇಂತಹ ಸಭೆಗಳು ಆಯೋಜಿಸಲಾಗುತ್ತಿವೆ.ಸಭೆಯಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಎಸ್‌ಐಆರ್…

Read More

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಸಭೆ: ರಾಜ್ಯ ನಾಯಕರಿಗೆ ವರದಿ ಸಲ್ಲಿಕೆ – ಡಾ. ಅಂಜಲಿ ಲಿಂಬಾಳ್ಕರ್

ಸಪ್ತಸಾಗರ ವಾರ್ತೆ,ವಿಜಯಪುರ, ಜು.18:ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಜಿಲ್ಲೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಎಐಸಿಸಿ ಕಾರ್ಯದರ್ಶಿ, ಮಾಜಿ ಶಾಸಕಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗೀಯ ಎಸ್‌ಐಆರ್ ವೀಕ್ಷಕಿ ಡಾ. ಅಂಜಲಿ ಲಿಂಬಾಳ್ಕರ್ ಅಧ್ಯಕ್ಷತೆಯಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ ನೇತೃತ್ವದಲ್ಲಿ ಸಭೆ ನಡೆಯಿತು.ಸಭೆಯಲ್ಲಿ ಜಿಲ್ಲೆಯ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ತಮ್ಮ ಕ್ಷೇತ್ರಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ವೇಳೆ ಎದುರಾಗುತ್ತಿರುವ ಸಮಸ್ಯೆಗಳನ್ನು ವಿವರಿಸಿದರು. ಹಲವೆಡೆ ಬಿಎಲ್‌ಒಗಳು…

Read More

ಬಬಲೇಶ್ವರದಲ್ಲಿ ಎಸ್‌ ಐ ಆರ್‌ ಶೇ. 99.84 ರಷ್ಟು ಪ್ರಗತಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 14:ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐಆರ್‌)ಗೆ ಸಂಬಂಧಿಸಿದಂತೆ ಮತಕ್ಷೇತ್ರದ ರಾಜಕೀಯ ಪಕ್ಷದ ಮುಖಂಡರೊಂದಿಗೆ ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಯಿತು.ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಮಾತನಾಡಿ, ಬಬಲೇಶ್ವರ ಮತಕ್ಷೇತ್ರದ ಒಟ್ಟು 2,25,779 ಮತದಾರರ ಪೈಕಿ 2,25,421 ಮತದಾರರಿಗೆ ಗಣತಿ ನಮೂನೆ ವಿತರಿಸಲಾಗಿದ್ದು, ಶೇ. 99.84 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.ಮತದಾರರಿಂದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ರುಜು ಪಡೆದು ಮರಳಿ ಬಿ.ಎಲ್.ಓ ತಂತ್ರಾಂಶದಲ್ಲಿ…

Read More

ಎಸ್‌ ಐ ಆರ್‌ ಗೆ ಸಹಾಯವಾಣಿ ಕೇಂದ್ರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 10:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆಮತದಾರರಿಗೆ ಗಣತಿ ನಮೂನೆಗಳನ್ನು ಭರ್ತಿ ಮಾಡುವ ಅನೂಕೂಲಕ್ಕಾಗಿ ಪ್ರತಿ ವಾರ್ಡ್ ನಲ್ಲಿ ಮತದಾರರ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಅವರು ತಿಳಿಸಿದ್ದಾರೆ.ಮಹಾನಗರ ಪಾಲಿಕೆಯ ಘನತ್ಯಾಜ್ಯ ವಾಹನಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಿಗೆ ಧ್ವನಿ ಮುದ್ರಣ ಮೂಲಕ ಪ್ರಚಾರ ಮಾಡಲಾಗುತ್ತಿದೆ.ವಿಜಯಪುರ ನಗರ ಪ್ರದೇಶದಲ್ಲಿ ಈ ಮೊದಲು ವಾಸವಿದ್ದ ಸ್ಥಳದ ಮತದಾರ ಪಟ್ಟಿಯಲ್ಲಿ ಹೆಸರು ದಾಖಲೆಯಿದ್ದು, ಹೊಸ…

Read More

SIR ವಿರುದ್ಧ ವಿವಿಧ ಸಂಘಟನೆಗಳ ಆಕ್ಷೇಪ: ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 30:ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್–Special Intensive Revision) ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಿ ಮರುಪರಿಶೀಲನೆ ನಡೆಸುವಂತೆ ಆಗ್ರಹಿಸಿ, ವಿಜಯಪುರದಲ್ಲಿ ವಿವಿಧ ಸಾಮಾಜಿಕ, ಪ್ರಗತಿಪರ ಹಾಗೂ ನಾಗರಿಕ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ಮನವಿಯಲ್ಲಿ, ಚುನಾವಣಾ ಆಯೋಗ ಜಾರಿಗೊಳಿಸಿರುವ ಎಸ್‌ಐಆರ್ ಪ್ರಕ್ರಿಯೆಯಿಂದ ಕೋಟ್ಯಂತರ ಮತದಾರರ ಮತದಾನದ ಹಕ್ಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ವಿಶೇಷವಾಗಿ ಬಡವರು, ಗ್ರಾಮೀಣ ಪ್ರದೇಶದ ಜನರು, ವಲಸೆ ಕಾರ್ಮಿಕರು,…

Read More