
ನಗರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗದಂತೆ ಶಾಶ್ವತ ಪರಿಹಾರ ಕಾಮಗಾರಿ ಕೈಗೊಳ್ಳಲು ಸಚಿವ ಎಂ.ಬಿ. ಪಾಟೀಲ ಸೂಚನೆ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20: ನಗರದಲ್ಲಿ ಮಳೆಯಿಂದ ಪದೇ ಪದೇ ಪ್ರವಾಹದಂತಹ ಪರಿಸ್ಥಿತಿ ಎದುರಾಗದಂತೆ ಶಾಶ್ವತ ಪರಿಹಾರಕ್ಕಾಗಿ ಸೂಕ್ತ ಕಾಮಗಾರಿಗಳನ್ನು ಕೈಗೊಂಡು ಅನುಷ್ಠಾನಗೊಳಿಸುವಂತೆ ನಗರಾಭಿವೃದ್ದಿ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸೂಚನೆ ನೀಡಿದರು.ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪ್ರತಿ ಬಾರಿ ಮಳೆ ಬಂದಾಗ ನಗರದ ವಿವಿಧ ತಗ್ಗು ಪ್ರದೇಶಗಳಲ್ಲಿ…