ಸಮಾಜ ಕಾರ್ಯದಲ್ಲಿ ಕೌಶಲ್ಯ ಎಂಬುದು ಜ್ಞಾನವನ್ನು ಕ್ರಿಯೆಗೆ ತಿರುಗಿಸುವ ಸೇತುವೆ : ಸಂತೋಷ ಹಳೆಮನಿ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 16:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದಸಮಾಜ ಕಾರ್ಯ ವಿಭಾಗದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಹಾಗೂ ವೃತ್ತಿ ಅವಕಾಶಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ವೃತ್ತಿ ಮಾರ್ಗದರ್ಶನಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಸಂತೋಷ ಹಳೆಮನಿ ಮಾತನಾಡಿ, ಸಮಾಜ ಕಾರ್ಯ ಎಂದರೆ ಕೇವಲಪುಸ್ತಕದಲ್ಲಿರುವ ಸಿದ್ಧಾಂತವಲ್ಲ. ಅದು ಬದುಕಿನ ನಡುವೆ ಇಳಿದು, ಜನರ ನೋವಿಗೆ ಕಿವಿಯಾಗಿ, ಅವರ ಶಕ್ತಿಯಾಗುವ ಪ್ರಯೋಗ ಶಾಲೆ ಎಂದರು. ನಂತರ ಎಂಎಸ್ಡಬ್ಲ್ಯು ವಿದ್ಯಾರ್ಥಿಗಳಿಗೆಪ್ರಸ್ತುತ ಉದ್ಯೋಗಾವಕಾಶಗಳು, ವೃತ್ತಿಪರ ರೆಸ್ಯೂಮ್ತಯಾರಿಕೆ, ಸಂದರ್ಶನ ಕೌಶಲ್ಯಗಳು, ಸಂವಹನ ಮತ್ತುವ್ಯಕ್ತಿತ್ವ…


