ಸೋಮದೇವರಹಟ್ಟಿ ತಾಂಡಾ ದುರ್ಗಾದೇವಿ ಮಂದಿರ ದೇಶದ ಪ್ರಮುಖ ದೇವಸ್ಥಾನಗಳಲ್ಲಿ ಒಂದು-ಸಚಿವ ಎಂ. ಬಿ. ಪಾಟೀಲ
ಸಪ್ತಸಾಗರ ವಾರ್ತೆ, ವಿಜಯಪುರ, ನ. 22: ಸೋಮದೇವರಹಟ್ಟಿ ತಾಂಡಾ ದುರ್ಗಾದೇವಿ ಮಂದಿರ ದೇಶದ ಪ್ರಮುಖ ದೇವಸ್ಥಾನಗಳಲ್ಲಿ ಒಂದು ಎಂಬ ಖ್ಯಾತಿ ಗಳಿಸಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ಮುಸ್ಸಂಜೆ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ ತಾಂಡಾದಲ್ಲಿ ಮಹಾದ್ವಾರದಿಂದ ದೇವಸ್ಥಾನದವರೆಗೆ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ರೂ.50 ಲಕ್ಷ ಅನುದಾನದಲ್ಲಿ ಕೈಗೊಳ್ಳಲಿರುವ ಸಿ.ಸಿ ರಸ್ತೆಯ ನಿರ್ಮಾಣಕ್ಕೆ ಚಾಲನೆ, ಅರವಿಂದ ನಾಯಿಕರವರ ಮನೆಯಿಂದ ಹೀರು ವೇಣು ರಾಠೋಡರ ಮನೆವರೆಗಿನ ಮಾರ್ಗಕ್ಕೆ…


