
ಆರೋಗ್ಯಯುತ ಜೀವನಕ್ಕೆ ದೈಹಿಕ-ಮಾನಸಿಕ ಸ್ಥಿರತೆ ಕಾಪಾಡಿಕೊಳ್ಳುವುದು ಅತ್ಯವಶ್ಯಕ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ
ಸಪ್ತಸಾಗರ ವಾರ್ತೆ ವಿಜಯಪುರ, ಸೆ.25:ಒತ್ತಡದ ಜೀವನದ ಮಧ್ಯೆ ಆರೋಗ್ಯಯುತ ಬದುಕಿಗೆ ದೈಹಿಕ ಹಾಗೂ ಮಾನಸಿಕ ಸ್ಥಿರತೆ ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಕ್ರೀಡಾ ಚಟುವಟಿಕೆಗಳನ್ನು ನಮ್ಮ ದೈನಂದಿನದ ಜೀವನದಲ್ಲಿ ಅಳವಡಿಸಿಕೊಂಡು ಮಾನಸಿಕ ಹಾಗೂ ದೈಹಿಕ ಸದೃಢತೆ ಹೊಂದಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕರೆ ನೀಡಿದರು.ನಗರದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಗುರುವಾರ ಹಮ್ಮಿಕೊಂಡಿದ್ದ ವಿಭಾಗ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಮಾನಸಿಕ…