ಜಿಲ್ಲೆಯ ದಕ್ಷಿಣ ಭಾಗದ ಜನರಿಗೂ ಅತ್ಯುತ್ತಮ ಆರೋಗ್ಯ ಸೇವೆ: ಡಾ. ಹೊನ್ನುಟಗಿ
ಸಪ್ತಸಾಗರ ವಾರ್ತೆ ವಿಜಯಪುರ, ಅ. 17: ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಸ್ಥಾಪಿಸುವ ಮೂಲಕ ನಗರದ ದಕ್ಷಿಣ ಭಾಗದ ಜನರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ತಿಳಿಸಿದ್ದಾರೆ.ಶುಕ್ರವಾರ ನಗರದ ಸರಕಾರಿ ಪಾಲಿಟೆಕ್ನಿಕ್ ಹಿಂಭಾದಲ್ಲಿರುವ ಬಿ.ಎಲ್.ಡಿ.ಇ ಆಯುರ್ವೇದ ಕಾಲೇಜಿನಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಿದ್ದ ಅಲೋಪಥಿ ಮತ್ತು ಆಯುರ್ವೇದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಮತ್ತು…


