ಭಟ್ಕಳ್ ದುರ್ಘಟನೆಯಲ್ಲಿ ಅನಾಥರಾಗಿರುವ 24 ಮಕ್ಕಳಿಗೆ ವಿಶೇಷ ನೆರವು ಕಲ್ಪಿಸಿ : ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 25:ಭಟ್ಕಳ ತಾಲೂಕಿನ ಪಳ್ಳಿಹೊಳೆಯಲ್ಲಿ ಏಕಾಏಕಿ ನೀರಿನ ಮಟ್ಟ ಹೆಚ್ಚಾಗಿ ಹತ್ತು ಜನ ಸಾವಿಗೀಡಾಗಿದ್ದು ಅತ್ಯಂತ ನೋವಿನ ಸಂಗತಿಯಾಗಿದೆ. ಈ ದುರ್ಘಟನೆಯಿಂದಾಗಿ 24 ಜನ ಮಕ್ಕಳ ಬದುಕು ಅತಂತ್ರವಾಗಿದೆ. ಈ ಮಕ್ಕಳು ಅನಾಥರಾಗಿದ್ದು, ತಕ್ಷಣ 24 ಮಕ್ಕಳಿಗೆ ಅವರ ಶಿಕ್ಷಣ ಮುಗಿಯುವವರೆಗೆ ವಸತಿಯುತ ಉಚಿತ ಶಿಕ್ಷಣ ನೀಡುವುದರ ಜೊತೆಗೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಬೇಕು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಮಾಜಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮನವಿ ಮಾಡಿಕೊಂಡಿದ್ದಾರೆ.ಈ…

Read More