ಯುವಕರಿಗೆ ವೃತ್ತಿಪರ ಕ್ರೀಡೆಗೆ ಪ್ರೋತ್ಸಾಹ: ಸುನೀಲಗೌಡ ಪಾಟೀಲ

ಬಬಲೇಶ್ವರ ಪ್ರೀಮಿಯರ್ ಲೀಗ್-2 ಸಮಾರೋಪ; ಗೇಮ್ ಚೇಂಜರ್ ಜೈನಾಪುರ ಚಾಂಪಿಯನ್ ಸಪ್ತಸಾಗರ ವಾರ್ತೆ,ವಿಜಯಪುರ, ಜು. 16:ಯುವಕರು ವೃತ್ತಿಪರ ಕ್ರೀಡಾಪಟುಗಳಾಗಿ ಬೆಳೆಯಲು ಅಗತ್ಯ ಪ್ರೋತ್ಸಾಹ ಹಾಗೂ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.ಬಬಲೇಶ್ವರದಲ್ಲಿ ದಿ. ಶ್ರೀ ಬಿ.ಎಂ. ಪಾಟೀಲ ಅವರ ಸ್ಮರಣಾರ್ಥ ಶಾಂತವೀರ ಕ್ರಿಕೆಟ್ ಕ್ಲಬ್ ಹಾಗೂ ಶ್ರೀ ಸುನೀಲಗೌಡ ಪಾಟೀಲ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ನಡೆದ ಬಬಲೇಶ್ವರ ಪ್ರೀಮಿಯರ್ ಲೀಗ್ (ಬಿಪಿಎಲ್) ಸೀಸನ್-2 ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ…

Read More

ಕ್ರೀಡಾ ಚಟುವಟಿಕೆಗಳಿಂದ ಜಿಲ್ಲೆಗೆ ಹೊಸ ಔಟ್‌ಲುಕ್:ಎಂಬಿಪಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 17:ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಶನ್ ವತಿಯಿಂದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟವನ್ನು ವಿಜಯಪುರದಲ್ಲಿ ಆಯೋಜಿಸುವ ಮೂಲಕ ಈ ಬೃಹತ್ ಕ್ರೀಡಾಕೂಟವು ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಆಯೋಜನೆಗೊಂಡಿದ್ದು, ವಿಜಯಪುರ ನಗರಕ್ಕೆ ಹೊಸ ಔಟ್‌ಲುಕ್ ನೀಡಿದೆ ಎಂದು ಬೃಹತ್ ಮತ್ತು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ಭಾನುವಾರ ನಗರದಲ್ಲಿ ಆರಂಭವಾದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ರಾಜ್ಯ ಮಟ್ಟದ ಪಂದ್ಯಾಟಗಳನ್ನು…

Read More

17ರಿಂದ 23ರ ವರೆಗೆ ಗುಮ್ಮಟನಗರಿಯಲ್ಲಿ ಬ್ಯಾಡ್ಮಿಂಟನ್‌ ಪಂದ್ಯ: 7 ದಿನಗಳವರೆಗೆ ಕ್ರೀಡಾ ಪ್ರೇಮಿಗಳಿಗೆ ಬ್ಯಾಡ್ಮಿಂಟನ್ ಆಕ್ಷನ್ ರಸದೌತಣ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ (KBA) ಅಧಿಕೃತ ಮಾನ್ಯತೆಯೊಂದಿಗೆ, ಯೋನೆಕ್ಸ್ ಸನ್‌ರೈಸ್ ಪ್ರಾಯೋಜಕತ್ವದಲ್ಲಿ ರಾಜ್ಯ ಮಟ್ಟದ ಯು-15 ಮತ್ತು ಯು-17 ಬ್ಯಾಡ್ಮಿಂಟನ್ ಪಂದ್ಯಾವಳಿ-2026 ಮೇ 17 ರಿಂದ ಮೇ 23 ರವರೆಗೆ ಐತಿಹಾಸಿಕ ನಗರಿ ವಿಜಯಪುರದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಎಂದು ಬ್ಯಾಡ್ಮಿಂಟನ್‌ ಅಸೋಸಿಯೇಶನ್‌ ಅಧ್ಯಕ್ಷ ಹಾಗೂ ಮಾಜಿ ಸಚಿವ ಕುಮಾರ ಬಂಗಾರಪ್ಪ ತಿಳಿಸಿದರು.ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಾದ್ಯಂತ ಇರುವ ಉದಯೋನ್ಮುಖ ಹಾಗೂ ಖ್ಯಾತ ಬ್ಯಾಡ್ಮಿಂಟನ್ ಆಟಗಾರರು ತಮ್ಮ ಕೌಶಲ್ಯ ಪ್ರದರ್ಶಿಸಲು ವಿಜಯಪುರಕ್ಕೆ ಲಗ್ಗೆ…

Read More

ಕ್ರೀಡೆಗಳಲ್ಲಿ ಸೋಲು ಗೆಲವು ಸಮಾನವಾಗಿ ಸ್ವೀಕರಿಸಿ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 1:ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ ಮುನ್ನಡೆದಾಗ ಮಾತ್ರ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಭಾರತೀಯ ಹಾಕಿ ತಂಡದ ಮಾಜಿ ನಾಯಕ, ಅರ್ಜುನ, ಏಕಲವ್ಯ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಕಿ ಆಟಗಾರ ಡಾ. ಆಶೀಶ ಕುಮಾರ ಬಲ್ಲಾಳ ಹೇಳಿದ್ದಾರೆ.ರವಿವಾರ ತಿಕೋಟಾದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಎ. ಬಿ. ಜತ್ತಿ ಪಿಯು ಕಾಲೇಜು(ಪ್ರೌಢಶಾಲೆ ವಿಭಾಗ) ನಲ್ಲಿ ಅಂತಾರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾಪಟು, ಖ್ಯಾತ ವೈದ್ಯ…

Read More

ಜ.29 ರಿಂದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ ಜ.13: ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಜನವರಿ 29 ರಿಂದ 31ರವರೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ 45 ವರ್ಷ ಮೇಲ್ಪಟ್ಟ ಹಾಗೂ ಒಳಗಿನವರಿಗೆ ಫುಟ್‌ಬಾಲ್, ವಾಲಿಬಾಲ್, ಹಾಕಿ, ಕಬಡ್ಡಿ, ಟೇಬಲ ಟೆನ್ನಿಸ್ (ಸಿಂಗಲ್ಸ್-ಡಬಲ್ಸ್) ಟೆನ್ನಿಸ್, ಶೆಟಲ್ ಬ್ಯಾಡ್ಮಿಂಟನ್, ಬಾಲ್ ಬ್ಯಾಡ್ಮಿಂಟನ್, ಕೇರಂ, ಕ್ರಿಕೆಟ್, ಬಾಸ್ಕೆಟ್‌ಬಾಲ್, ಚೆಸ್, ಟೆನಿಕ್ವಾಯಿಟ್, ಯೋಗ,ಥ್ರೋಬಾಲ್ ಆಟೋಟಗಳು, ಈಜು, ಭಾರ ಎತ್ತುವ ಸ್ಪರ್ಧೆ ಏರ್ಪಡಿಸಲಾಗಿದೆ.ಸಾಂಸ್ಕೃತಿಕ ಕಾರ್ಯಕ್ರಮಗಳಾದ…

Read More

ಕ್ರೀಡೆಯಲ್ಲಿ ಗೆಲುವಿಗಿಂತ ಭಾಗವಹಿಸುವ ಮನೋಭಾವವೇ ಮುಖ್ಯ:ಶೇಖರಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28: ಕ್ರೀಡೆಯಲ್ಲಿ ಗೆಲುವಿಗಿಂತ ಭಾಗವಹಿಸುವ ಮನೋಭಾವವೇ ಮುಖ್ಯ. ನಿರಂತರ ಪ್ರಯತ್ನಗಳ ನಡುವೆ ಎದುರಾಗುವ ವಿಫಲತೆಗಳೇ ಕೊನೆಗೆ ಯಶಸ್ಸಿನ ಮೆಟ್ಟಿಲಾಗುತ್ತವೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಮತ್ನಾಳ್ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್ ಇವರ ಸಹಯೋಗದಲ್ಲಿ ರವಿವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕಿಶೋರಿ ಮತ್ತು ಕಿಶೋರ ನಾಯಕರ ಕ್ರೀಡಾ ಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸರ್ಕಾರ…

Read More

ಟೈಕೊಂಡೊ ಸ್ಫರ್ಧೆ: ರಾಜ್ಯ ಮಟ್ಟಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 18: ಇಲ್ಲಿನ ಕೆ.ಬಿ.ಎಸ್ ನಂ. ೫ರ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಟೈಕೊಂಡೊ ಸ್ಫರ್ಧೆಯಲ್ಲಿ ಎಕ್ಸಲಂಟ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ನಗರ ಹೊರವಲಯದಲ್ಲಿ ಇರುವ ಇಟ್ಟಂಗಿಹಾಳ ರಸ್ತೆಯ ಎಕ್ಸಲಂಟ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿನಿಯರಾದ ಕುಮಾರಿ ನೀಲವೇಣಿ ಕಾವೇಕರ ಅವರು ೩೮ ಕೆ.ಜಿ. ಟೈಕೊಂಡದಲ್ಲಿ ಪ್ರಥಮ ಸ್ಥಾನ, ೫೯ಕೆ.ಜಿ ಟೈಕೊಂಡದಲ್ಲಿ ಪುಷ್ಪಾ ರಾಠೋಡ ಪ್ರಥಮ ಸ್ಥಾನ ಪಡೆದು ಧಾರವಾಡದಲ್ಲಿ ನಡೆಯುವ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ಈ…

Read More

ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.9:ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 17ರಂದು ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.ಸಾಂಸ್ಕೃತಿಕ ಸ್ಪರ್ಧೆಗಳಾದ ಗಾಯನ ಹಾಗೂ ಏಕ ಪಾತ್ರಾಭಿನಯ ಸ್ಪರ್ಧೆ ಹಾಗೂ ಕ್ರೀಡಾ ಸ್ಪರ್ಧೆಗಳಾದ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ , ಬಕೆಟ್‍ನಲ್ಲಿ ಬಾಲ್ ಎಸೆಯುವುದು.60 ರಿಂದ 70 ವಯೋಮಾನ‌ದವರು ಭಾಗವಹಿಸಬಹುದು.ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಸಂಯೋಜಕರಾದ ಪ್ರತಿಭಾ ಮಾದರ ಮೊ:…

Read More

ಕ್ರೀಡಾ ಕ್ಷೇತ್ರದಲ್ಲಿ ಸಾಧಕರಾಗಿ ಜಿಲ್ಲೆಯ ಕೀರ್ತಿ ಹೆಚ್ಚಿಸಿ -ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.3: ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೆಚ್ಚು ಹೆಚ್ಚು ಪ್ರಶಸ್ತಿ ಪಡೆದು ಜಿಲ್ಲೆಗೆ ಕೀರ್ತಿ ತರಬೇಕು ಎಂದು ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಡಾ. ಬಿ.ಆರ್.ಅಂಬೆಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಪಠ್ಯದೊಂದಿಗೆ ಕ್ರೀಡೆಗಳಲ್ಲಿಯೂ ಭಾಗಿಯಾಗಿ ಸತತ ಪರಿಶ್ರಮದಿಂದ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ…

Read More