ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಕ್ರೀಡೆಗಳು ಪೂರಕ:ಜಯರಾಜ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 29: ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂರಕವಾಗಿವೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ. ಶುಕ್ರವಾರ ಡೀಮ್ಡ್ ವಿಶ್ವವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವಪ್ರಸಿದ್ಧ ಹಾಕಿ ಕ್ರೀಡಾಪಟು ಮೇಜರ್ ಧ್ಯಾನಚಂದ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಮಾತನಾಡಿದರು.ಇದೇ ವೇಳೆ ವಿದ್ಯಾರ್ಥಿಗಳಿಗಾಗಿ ಬ್ಯಾಸ್ಕೆಟ್‌ಬಾಲ್ ಮತ್ತು ಚೆಸ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸುಭಗಾ ಅವರು ಫಿಟ್ ಇಂಡಿಯಾ…


