ಆ.೭ರಂದು ಉದ್ಯೋಗ ಮೇಳ

ಸಪ್ತಸಾಗರ ವಾರ್ತೆ,ವಿಜಯಪುರ, ಆ.೧: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಜಯಪುರ ಹಾಗೂ ಸಿಕ್ಯಾಬ್ ಸಂಸ್ಥೆಯ ಮಲಿಕ್ ಸಂದಲ್ ಪಾಲಿಟೆಕ್ನಿಕ್ ವಿಜಯಪುರ, ಇವರ ಸಹಯೋಗದೊಂದಿಗೆ ನಗರದ ಬಾಗಲಕೋಟೆ ರಸ್ತೆಯಲ್ಲಿರುವ ಸಿಕ್ಯಾಬ್ ಸಂಸ್ಥೆಯ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಕಾಲೇಜ್‌ನಲ್ಲಿ ಆ.೭ರಂದು ಉದ್ಯೊಗ ಮೇಳ ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ ೧೦ ಗಂಟೆಗೆ ನಡೆಯುವ ಉದ್ಯೋಗ ಮೇಳದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಎಂಎನ್‌ಸಿ ಕಂಪನಿಗಳು ಹಾಗೂ ಸ್ಥಳೀಯ ಖಾಸಗಿ ಕಂಪನಿಗಳಿಂದ ವಿವಿಧ ಹುದ್ದೆಗಳ ನೇಮಕಾತಿ ನಡೆಯಲಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ ಹಾಗೂ ಯಾವುದೇ ಪದವಿ,…

Read More

ಶುಲ್ಕ ಮರುಪಾವತಿ ಯೋಜನೆ : ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ,ಜು. 30:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ- ಊಟ ಮತ್ತು ವಸತಿ ಸಹಾಯ ಯೋಜನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ವಿದ್ಯಾರ್ಥಿಗಳು https://ssp.postmatric.karnataka.gov.in ವೆಬ್‌ಸೈಟ್ ನಲ್ಲಿ ಸೆಪ್ಟೆಂಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ಹಾಗೂ 8050770005 ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು…

Read More

ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15:ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹ ಧನ ಪಡೆಯಲು 2024-25ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಯನ್ನುhttps://swdservice.karnataka.gov.in/PrizeMoneyClientAPP/ ವೆಬ್‌ಸೈಟ್ ಮೂಲಕ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ-ತಾಲೂಕಾ ಮಟ್ಟದ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More