
ಏಕತಾರಿ ರಾಮಯ್ಯನವರಿಗೆ ರಾಜ್ಯ ಪ್ರಶಸ್ತಿ ನೀಡಲು ಸಿಎಂಗೆ ಯತ್ನಾಳ್ ಒತ್ತಾಯ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24: ಜಾನಪದ ಗಾಯಕ, ತಂತಿ ವಾದ್ಯಗಳ ತಯಾರಕರಾದ ಏಕತಾರಿ ರಾಮಯ್ಯನವರ ಅವರಿಗೆ ರಾಜ್ಯ ಪ್ರಶಸ್ತಿ ನೀಡುವಂತೆ ಒತ್ತಾಯಿಸಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು, ಮುಖ್ಯಮಂತ್ರಿಗಳಾದ ಸಿದ್ದರಾಯಯ್ಯನವರಿಗೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ ಅವರಿಗೆ ಬುಧವಾರ ಪತ್ರ ಬರೆದಿದ್ದಾರೆ.ಬೆಂಗಳೂರಿನ ಗೊಲ್ಲಹಳ್ಳಿ ಹೋಬಳಿಯ ಕೆಂಚನಪಾಳ್ಯ ಗ್ರಾಮದ ನಿವಾಸಿಯಾಗಿರುವ ಜಾನಪದ ಗಾಯಕ ಏಕತಾರಿ ರಾಮಯ್ಯನವರು ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ಪ್ರತಿಭೆಯ ಮೂಲಕ ಜಾನಪದ ಲೋಕಕ್ಕೆ ಸಾಕಷ್ಟು…