ವಿಜಯಪುರದಲ್ಲಿ ಮೇ 17 ರಿಂದ ಪ್ರಪ್ರಥಮ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ: ಪಂದ್ಯಾಟದಲ್ಲಿ 756 ಆಟಗಾರರು ಭಾಗಿ- ಕುಮಾರ ಬಂಗಾರಪ್ಪ
ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ಐತಿಹಾಸಿಕ ಗುಮ್ಮಟ ನಗರಿ ವಿಜಯಪುರದಲ್ಲಿ ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಮೇ 17 ರಿಂದ ಆಯೋಜಿಸಲಾಗಿದೆ ಎಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ರಾಜ್ಯ ಅಧ್ಯಕ್ಷ ಕುಮಾರ ಬಂಗಾರಪ್ಪ ತಿಳಿಸಿದರು.ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಬಿಎಲ್ಡಿಇ ಸಂಸ್ಥೆಯ ಸಹಯೋಗದಲ್ಲಿ ಅನೆಕ್ಸ್ ಸನ್ ರೈಸರ್ ಟೈಟಲ್ ಕಾರ್ಡ್ ನಡಿ ಈ ಪಂದ್ಯಾವಳಿ ನಡೆಯಲಿದೆ ಎಂದರು.ಈಗಾಗಲೇ ರಾಜ್ಯದ ವಿವಿಧ ಭಾಗಗಳಿಂದ 756 ಕ್ರೀಡಾಪಟುಗಳು ನೋಂದಾಯಿಸಿಕೊಂಡಿದ್ದು, ರಾಜ್ಯ, ರಾಷ್ಟ್ರ…


