
ಶೀಘ್ರವೇ ವಿಜಯಪುರದಲ್ಲಿ ಉಕ್ಕಿನಹಕ್ಕಿ ಹಾರಾಟ ಆರಂಭ: ಸಚಿವ ಎಂ. ಬಿ. ಪಾಟೀಲ
ಸಪ್ತಸಾಗರ ವಾರ್ತೆ, ವಿಜಯಪುರ,ಆ. 15:ನಮಗೆ ಸಿಕ್ಕಿರುವ ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು ನಾವೆಲ್ಲರೂ ಸುಖವಾಗಿದ್ದೇವೆ. ಇದನ್ನು ನಾವು ಎಂದಿಗೂ ಮರೆಯದೆ, ಆ ಹಿರಿಯರಿಗೆ ಕೃತಜ್ಞರಾಗಿರಬೇಕು ಮತ್ತು ಈ ಸಂದೇಶವನ್ನು ನಮ್ಮ ಕಿರಿಯ ತಲೆಮಾರಿಗೂ ಮುಟ್ಟಿಸಬೇಕು. ಇದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ…