ನಿಗದಿತ ಅವಧಿಯಲ್ಲಿ ಗುರಿ ಸಾಧಿಸಿ- ಡಾ. ಔದ್ರಾಮ ಅಧಿಕಾರಿಗಳಿಗೆ ಸೂಚನೆ
ಸಪ್ತಸಾಗರ ವಾರ್ತೆ, ವಿಜಯಪುರ.ಡಿ.16:ಎಸ್ ಸಿಪಿ-ಟಿಎಸ್‌ಪಿಯಡಿ ನಿಗದಿಪಡಿಸಿದ ಆರ್ಥಿಕ ಮತ್ತು ಭೌತಿಕ ಗುರಿ ಸಾಧಿಸಿ, ನಿಗದಿತ ಅವಧಿಯಲ್ಲಿ ಕಾಮಗಾರಿ ಅನುಷ್ಠಾನಗೊಳಿಸಿ,ಮಾರ್ಚ್ ಅಂತ್ಯದವರೆಗೆ ನಿಗದಿಪಡಿಸಿದ ಪ್ರಗತಿ ಸಾಧಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ತಿಳಿಸಿದರು.ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2025-2026ನೇ ಸಾಲಿನ ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆಯ ಇಲಾಖಾವಾರು ಡಿಸೆಂಬರ್-2025ರ ಮಾಹೆಯದ ಅಂತ್ಯಕ್ಕೆ ಸಾಧಿಸಿದ ಪ್ರಗತಿ ವರದಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಸ್ ಸಿಪಿ-ಟಿಎಸ್‌ಪಿ ಕಾಯ್ದೆಯಡಿ ನಿಗದಿತ…


