ಬಕ್ರೀದ್ ಹಿನ್ನೆಲೆ ಜಿಲ್ಲಾದ್ಯಂತ ಕಟ್ಟೆಚ್ಚರಕ್ಕೆ ರಾಮನಗೌಡ ಹಟ್ಟಿ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 25:ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳಲ್ಲಿ ಅನಧಿಕೃತವಾಗಿ ಜಾನುವಾರುಗಳ ಸಾಗಣೆಯಾಗದಂತೆ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಗೌಡ ಹಟ್ಟಿ ಹೇಳಿದರು.ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಸಹಯೋಗದಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದಾಖಲೆಗಳಿಲ್ಲದೆ ಜಾನುವಾರುಗಳ ಸಾಗಣೆ ಮಾಡುವುದು ಕಾನೂನಿನ ವಿರುದ್ಧವಾಗಿದೆ. ಹಾಗಾಗಿ ಅಕ್ರಮವಾಗಿ ಜಾನುವಾರುಗಳ ಸಾಗಣೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು…

Read More