ಹೋರಾಟಕ್ಕೆ ರಾಯಣ್ಣ, ವಿಶ್ವಪ್ರಜ್ಞೆಗೆ ಕನಕದಾಸರು, ಶಿಕ್ಷಣಕ್ಕೆ ಅಹಲ್ಯಾಬಾಯಿ, ಸಾಮಾಜಿಕ ಬದ್ಧತೆಗೆ ಸಿದ್ದರಾಮಯ್ಯ ಅವರ ಮಾದರಿಗಳು ನಮ್ಮ ಜೊತೆಗಿವೆ: ಕೆವಿಪಿ
ಸಪ್ತಸಾಗರ ವಾರ್ತೆ ಕೋಲಾರ, ಸೆ. 28: ನಮ್ಮ ಸಮುದಾಯದ ಪ್ರತಿಭೆಗಳು ಸಮಾಜದ ಆಸ್ತಿಗಳಾಗಿ ಅರಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು.ಕರ್ನಾಟಕ ರಾಜ್ಯ ಕನಕನೌಕರರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ನಮ್ಮ ಕುಲಕ್ಕೆ, ಸಮುದಾಯಕ್ಕೆ ಒಂದು ಶ್ರಮಿಕ ಪರಂಪರೆ ಇದೆ. ಈ ಪರಂಪರೆಯ ಒಳಗೆ ಅದ್ಭುತವಾದ ಮಾದರಿ ವ್ಯಕ್ತಿತ್ವಗಳೂ ಇವೆ. ಛಲ ಮತ್ತು ಹೋರಾಟಕ್ಕೆ ಸಂಗೊಳ್ಳಿ ರಾಯಣ್ಣ ಮಾದರಿ ಆದರೆ, ವಿಶ್ವಪ್ರಜ್ಞೆಗೆ ಕನಕದಾಸರು ಮಾದರಿ ಆಗಿದ್ದಾರೆ. ಶಿಕ್ಷಣಕ್ಕೆ…


