ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಶಿಕ್ಷಕನ ವಿರುದ್ಧ ಕಾನೂನು ಕ್ರಮ : ಸಂಗಮೇಶ ಬಬಲೇಶ್ವರ
Legal action against teacher for assaulting student: Sangamesh Babaleshwar
Legal action against teacher for assaulting student: Sangamesh Babaleshwar
ಸಪ್ತಸಾಗರ ವಾರ್ತೆ, ವಿಜಯಪುರ, ಅ. 1: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಬೆಂಗಳೂರ ವತಿಯಿಂದ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಎಂಟು ದಿನಗಳ ಕಾಲ “ನಾನು ವಿಜ್ಞಾನಿ 2025” ಶೀರ್ಷಿಕೆಯಡಿಯಲ್ಲಿ ಶಾಲೆಗೊಂದು ಟೆಲೆಸ್ಕೋಪ ತಯಾರಿಸುವ ತರಬೇತಿಯನ್ನು ನುರಿತ ತಜ್ಞರಿಂದ ನೀಡಲಾಗುತ್ತದೆ.ಇದೊಂದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗುವ ಸದಾವಕಾಶ ಒದಗಿ ಬಂದಿದೆ. ಈ ತರಬೇತಿಯನ್ನು ದೊಡ್ಡಬಳ್ಳಾಪುರ ಬಳಿಯಿರುವ ಬ್ಯಾಸೆಂಟ್ ಉದ್ಯಾನವನ ಸ್ಕೌಟ್ ಕ್ಯಾಂಪಿನಲ್ಲಿ ನೀಡಲಾಗುವುದು.ವಿಜಯಪುರ ಜಿಲ್ಲೆಯ ಮುಳವಾಡ ಪ್ರೌಢಶಾಲೆಯ ಹತ್ತನೇ ವರ್ಗದ ವಿದ್ಯಾರ್ಥಿ ಕುಮಾರ ಕೃಷ್ಣ ಬಸಪ್ಪ…
ಸಪ್ತಸಾಗರ ವಾರ್ತೆ, ವಿಜಯಪುರ, ಆ. 29: ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂರಕವಾಗಿವೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ. ಶುಕ್ರವಾರ ಡೀಮ್ಡ್ ವಿಶ್ವವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವಪ್ರಸಿದ್ಧ ಹಾಕಿ ಕ್ರೀಡಾಪಟು ಮೇಜರ್ ಧ್ಯಾನಚಂದ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಮಾತನಾಡಿದರು.ಇದೇ ವೇಳೆ ವಿದ್ಯಾರ್ಥಿಗಳಿಗಾಗಿ ಬ್ಯಾಸ್ಕೆಟ್‌ಬಾಲ್ ಮತ್ತು ಚೆಸ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸುಭಗಾ ಅವರು ಫಿಟ್ ಇಂಡಿಯಾ…
ಸಪ್ತಸಾಗರ ವಾರ್ತೆ ವಿಜಯಪುರ, ಆ. 7:ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿಗಳ ಮಧ್ಯೆ ಕಲಹ ಉಂಟಾಗಿ ಓರ್ವ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಅಸು ನೀಗಿದ ಘಟನೆ ನಗರ ಹೊರ ವಲಯದ ಯೋಗಾಪುರ ಗ್ರಾಮದಲ್ಲಿ ನಡೆದಿದೆ.ಶ್ರೀ ಸತ್ಯ ಸಾಯಿಬಾಬಾ ಶಾಲೆಯ ವಿದ್ಯಾರ್ಥಿ ಅನ್ಸ್ (11) ಮೃತಪಟ್ಟಿದ್ದಾನೆ. ಬಿಹಾರ ಮೂಲದ ಸುನೀಲ್ ಪುತ್ರ ಅನ್ಸ್5ನೇ ತರಗತಿಯಲ್ಲಿ ಓದುತ್ತಿದ್ದ. ಕೈಯಲ್ಲಿ ಕಟ್ಟುವ ವಾಚ್ ಗಾಗಿ ಬಾಲಕ ಅನ್ಸ್ ಈತನ ಮೇಲೆ 9ನೇ ತರಗತಿ ಬಾಲಕರು ಹಲ್ಲೆ ನಡೆಸಿದ್ದು, ಗಾಯಗೊಂಡಿದ್ದ ಅನ್ಸ್ ಈತನನ್ನು ಅವರ ಪೋಷಕರು…
ಸಪ್ತ ಸಾಗರ ವಾರ್ತೆ, ವಿಜಯಪುರ,ಆ.6: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ವಿದ್ಯಾರ್ಥಿಗಳು https://scholarships.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.