ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಉದ್ಯೋಗ ಸಂದರ್ಶನ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 14: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ಸಿವಿಲ್ ಎಂಜಿನಿಯರಿಂಗ್ ಡಿಪ್ಲೋಮಾ ವಿದ್ಯಾರ್ಥಿಗಳಿಗಾಗಿ ಖ್ಯಾತ ‘ವ್ಯಾಲ್ಯೂ ವೆಂಚರ್ಸ್’ ಸಂಸ್ಥೆಯ ವತಿಯಿಂದ ಮಂಗಳವಾರ ಕ್ಯಾಂಪಸ್ ಉದ್ಯೋಗ ಸಂದರ್ಶನ ನಡೆಯಿತು.ಸಂದರ್ಶನದಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡರು. ಸಂಸ್ಥೆಯ ಹರ್ಷವರ್ಧನ ಹಾಗೂ ಮಾನವ ಸಂಪನ್ಮೂಲ ವ್ಯವಸ್ಥಾಪಕಿ ಗೀತಾ ನೇಮಕಾತಿ ಪ್ರಕ್ರಿಯೆ ನಡೆಸಿದರು.ವಿದ್ಯಾಲಯದ ಪ್ರಾಚಾರ್ಯ ಪ್ರಭುದೇವ ಬಿ. ಕಳಸಗೊಂಡ, ಉದ್ಯೋಗಾಧಿಕಾರಿ ಸುಧನ್ವ ವಿ. ಕುಲಕರ್ಣಿ, ಸಿವಿಲ್ ವಿಭಾಗದ…

Read More

ಯುವ ಸಂಸತ್‌ನಲ್ಲಿ ವಿದ್ಯಾರ್ಥಿಗಳಿಂದ ಅರ್ಥಪೂರ್ಣ ಚರ್ಚೆ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 14:ತಿಕೋಟಾ ಪಟ್ಟಣದ ಹಜಿಮಸ್ತಾನಿ ಶಾದಿ ಮಹಲ್‌ನಲ್ಲಿ ಅ.13ರಂದು ನಡೆದ ಯುವ ಸಂಸತ್ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ 250 ವಿದ್ಯಾರ್ಥಿಗಳು ಭಾಗವಹಿಸಿ, ಸಂಸದೀಯ ಕಲಾಪದ ಮಾದರಿಯನ್ನು ಸಮರ್ಥವಾಗಿ ಪ್ರಸ್ತುತಪಡಿಸಿದರು.ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಪೀಠಿಕಾ ವಾಚನ ಹಾಗೂ ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು.ಅಧ್ಯಕ್ಷತೆ ವಹಿಸಿದ್ದ ತಿಕೋಟಾ ತಹಶೀಲ್ದಾರ್ ಸುರೇಶ ಚವಲರ್ ಮಾತನಾಡಿ, ಯುವ ಸಂಸತ್ ಕೇವಲ ಅಣಕು ಪ್ರದರ್ಶನವಲ್ಲ; ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಯುವಜನರ ಮನಸ್ಸಿನಲ್ಲಿ ಬಿತ್ತುವ ವೇದಿಕೆಯಾಗಿದೆ. ವಿದ್ಯಾರ್ಥಿಗಳಲ್ಲಿ…

Read More

ಟೊಯೋಟಾ ಕ್ಯಾಂಪಸ್ ಡ್ರೈವ್‌ನಲ್ಲಿ 240 ವಿದ್ಯಾರ್ಥಿಗಳ ಭಾಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 12:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಪೂಜ್ಯ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ವತಿಯಿಂದ ನಡೆದ ಎರಡು ದಿನಗಳ ಪೂಲ್ ಕ್ಯಾಂಪಸ್ ಸಂದರ್ಶನದಲ್ಲಿ 240ಕ್ಕೂ ಹೆಚ್ಚು ಡಿಪ್ಲೋಮಾ ವಿದ್ಯಾರ್ಥಿಗಳು ಭಾಗವಹಿಸಿದರು.ಅಕ್ಟೋಬರ್ 9 ಮತ್ತು 10ರಂದು ನಡೆದ ಕ್ಯಾಂಪಸ್ ಡ್ರೈವ್‌ಗೆ ವಿಜಯಪುರ ನಗರ ಹಾಗೂ ಜಿಲ್ಲೆಯ ವಿವಿಧ ಪಾಲಿಟೆಕ್ನಿಕ್ ಕಾಲೇಜುಗಳ 320ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅರ್ಹತೆ ಪಡೆದ 240 ವಿದ್ಯಾರ್ಥಿಗಳು ಲಿಖಿತ ಪರೀಕ್ಷೆ, ತಾಂತ್ರಿಕ ಮೌಲ್ಯಮಾಪನ ಹಾಗೂ ನೇರ ಸಂದರ್ಶನದಲ್ಲಿ ಪಾಲ್ಗೊಂಡರು….

Read More

ಕ್ರೀಡಾಕೂಟ: ಕಳ್ಳಕವಟಗಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ

ಸಪ್ತಸಾಗರ ವಾರ್ತೆ,ತಿಕೋಟಾ, ಅ. 11: ವಿಜಯಪುರ ಗ್ರಾಮೀಣ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟ ಅರಕೇರಿಯ ಜ್ಞಾನಜ್ಯೋತಿ ವಸತಿ ಶಾಲೆಯಲ್ಲಿ ನಡೆಯಿತು.ಕಳ್ಳಕವಟಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡಾ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.14 ವರ್ಷದೊಳಗಿನ ಬಾಲಕರ ವಾಲಿಬಾಲ್‌ನಲ್ಲಿ ವಿಷ್ಣು ರಾಠೋಡ್, ಆದಿತ್ಯ ರಾಠೋಡ್, ದರ್ಶನ್ ರಾಠೋಡ್, ಸಾಯಿನಾಥ ರಾಠೋಡ್, ಕುಮಾರ್ ರಾಠೋಡ್ ಹಾಗೂ ದಿನೇಶ ಪವಾರ ಅವರು ಉತ್ತಮ ಪ್ರದರ್ಶನ ನೀಡಿ ತಾಲ್ಲೂಕು ಮಟ್ಟದಲ್ಲಿ ಜಯಗಳಿಸಿ ಜಿಲ್ಲಾಮಟ್ಟಕ್ಕೆ ಅರ್ಹತೆ…

Read More

ರಾಣಿ ಚನ್ನಮ್ಮನ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಲಿ: ಪ್ರೊ. ತ್ಯಾಗರಾಜ

ಸ್ವಾತಂತ್ರ್ಯ, ಸ್ವಾಭಿಮಾನ, ಧೈರ್ಯ ಮತ್ತು ಸಾಹಸದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 16: ಕಿತ್ತೂರು ರಾಣಿ ಚನ್ನಮ್ಮನ ಚರಿತ್ರೆ ಹಾಗೂ ಅವರ ಸ್ವಾತಂತ್ರ್ಯ, ಸ್ವಾಭಿಮಾನ, ಧೈರ್ಯ ಮತ್ತು ಸಾಹಸದ ಆದರ್ಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ವಿಶೇಷವಾಗಿ ವಿದ್ಯಾರ್ಥಿಗಳು ಈ ಆದರ್ಶಗಳನ್ನು ತಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ.ಎಂ. ತ್ಯಾಗರಾಜ ಕರೆ ನೀಡಿದರು.ನಗರದ ಡಾ. ಫ.ಗು. ಹಳಕಟ್ಟಿ ಸ್ನಾತಕೋತ್ತರ ಕೇಂದ್ರದಲ್ಲಿ ರಾಣಿ ಚನ್ನಮ್ಮ ಅಧ್ಯಯನ ಪೀಠದ…

Read More

ಬಹುಭಾಷಾ ಜ್ಞಾನ ವಿದ್ಯಾರ್ಥಿಗಳ ಪ್ರಗತಿಗೆ ಕೀಲಿಕೈ: ದೀಪಕ್ ಶಿಂತ್ರೆ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 12:ಮರಾಠಿ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಸಂರಕ್ಷಿಸುವುದರೊಂದಿಗೆ ಕನ್ನಡ ಭಾಷೆಯನ್ನೂ ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಬಹುಭಾಷಾ ಜ್ಞಾನವು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೈಯಕ್ತಿಕ ಪ್ರಗತಿಗೆ ಪೂರಕವಾಗಲಿದೆ ಎಂದು ಕರ್ನಾಟಕ ರಾಜ್ಯ ಮರಾಠಿ ಸಾಹಿತ್ಯ ಪರಿಷತ್ತಿನ ವಿಜಯಪುರ ಜಿಲ್ಲಾಧ್ಯಕ್ಷ ದೀಪಕ್ ಶಿಂತ್ರೆ ಹೇಳಿದರು.ಕರ್ನಾಟಕ ರಾಜ್ಯ ಮರಾಠಿ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಮರಾಠಿ ವಿದ್ಯಾಲಯದಲ್ಲಿ ‘ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳು’ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಹಾಗೂ ‘ಮೊಬೈಲ್ ಬಿಟ್ಟು, ಪುಸ್ತಕ ಹಿಡಿಯಿರಿ’ ವಿಷಯದ ಕುರಿತು…

Read More

ಎಐ ತಂತ್ರಜ್ಞಾನವನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಲಿ

ಮುಗಳಖೋಡದಲ್ಲಿ ಪದವಿ ಮಹಾವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಸಪ್ತಸಾಗರ ವಾರ್ತೆ,ಮುಗಳಖೋಡ, ಆ. 14:ಆಧುನಿಕ ಯುಗದಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ವಿದ್ಯಾರ್ಥಿಗಳಿಗೆ ಹಲವು ರೀತಿಯಲ್ಲಿ ಸಹಕಾರಿಯಾಗುತ್ತಿದೆ. ಅಗತ್ಯವಿದ್ದಾಗ ಎಐ ತಂತ್ರಜ್ಞಾನವನ್ನು ಬಳಸಿಕೊಂಡು ಅದರಲ್ಲಿರುವ ಒಳ್ಳೆಯ ಅಂಶಗಳನ್ನು ಮಾತ್ರ ಅಳವಡಿಸಿಕೊಂಡರೆ ಸಮಾಜದ ಉತ್ತಮ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ರಾಷ್ಟ್ರೀಯ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಗುರನಿಂಗಯ್ಯ ಮಠಪತಿ ಹೇಳಿದರು.ಪಟ್ಟಣದ ಶ್ರೀ ಚ.ವಿ.ವ. ಸಂಘದ ಡಾ. ಸಿ.ಬಿ. ಕುಲಿಗೋಡ ಪದವಿ ಮಹಾವಿದ್ಯಾಲಯದಲ್ಲಿ 2026-27ನೇ ಸಾಲಿನ ಪ್ರಥಮ…

Read More

ಎಕ್ಸಲಂಟ್ ಸಂಸ್ಥೆಯಿಂದ 29 ವಿದ್ಯಾರ್ಥಿಗಳು ನವೋದಯ ಶಾಲೆಗಳಿಗೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 21:ಪ್ರತಿ ವರ್ಷವೂ ಉತ್ತಮ ಫಲಿತಾಂಶ ನೀಡುವ ಮೂಲಕ ಮನೆ ಮಾತಾಗಿರುವ ಎಕ್ಸಲಂಟ್ ಸಂಸ್ಥೆಯು 2025-26ನೇ ಸಾಲಿನ ಜವಾಹರ ನವೋದಯ ಶಾಲೆಗಳ ಪ್ರವೇಶ ಪರೀಕ್ಷೆಯಲ್ಲಿ ತನ್ನ ಫಲಿತಾಂಶದ ಹೆಜ್ಜೆ ಗುರುತನ್ನು ಮತ್ತಷ್ಟು ಗಟ್ಟಿಗೊಳಿಸಿದೆ. 29 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಎಕ್ಸಲಂಟ್ ತನ್ನ ಗುಣಮಟ್ಟಕ್ಕೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ.ಗಣೇಶ ಪಾಟೀಲ್(ಶೇ.98.75), ಸಮರ್ಥ ಚವ್ಹಾಣ(97.50), ಶ್ರೀಕರ ಗಗನಮಾಳಿ(97.50), ಕಾರ್ತಿಕ ಸತ್ಯಪ್ಪನವರ(97.50), ಸೃಜನ್ ಗೊರೆ(97.50), ಕೃತಿಕೇಶ ಹೊಂಗಲ್(97.50), ಕರುಣಸಾಗರ ಬಾದವಾಡಗಿ (96.25),…

Read More

ಪ್ರಿಸಿಶನ್ ಕ್ಯಾಮ್‌ಶಾಫ್ಟ್ ಇಂಡಿಯಾ ಲಿಮಿಟೆಡ್‌ಗೆ ವಿದ್ಯಾರ್ಥಿಗಳ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 29:ಕ್ಯಾಂಪಸ್ ಡ್ರೈವ್‌ನಲ್ಲಿ 24 ವಿದ್ಯಾರ್ಥಿಗಳು ಪ್ರಿಸಿಶನ್ ಕ್ಯಾಮ್‌ಶಾಫ್ಟ್ ಇಂಡಿಯಾ ಲಿಮಿಟೆಡ್‌ಗೆ ಆಯ್ಕೆಯಾಗಿದ್ದಾರೆ.ಬಿಎಲ್‌ಡಿಇ ಸಂಸ್ಥೆ ಯ ವಚನ ಪಿತಾಮಹ ಡಾ. ಪಿ.ಜಿ. ಹಳಕಟ್ಟಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಜನವರಿ 20 ರಂದು ನಡೆದ ಕ್ಯಾಂಪಸ್ ಆಯ್ಕೆಯಲ್ಲಿ ಹೊಸ ದಾಖಲೆಯನ್ನು ಸ್ಥಾಪಿಸಿತು. ಒಟ್ಟು 24 ವಿದ್ಯಾರ್ಥಿಗಳಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ -18 ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದ – 06 ವಿದ್ಯಾರ್ಥಿಗಳು ಪ್ರಿಸಿಶನ್ ಕ್ಯಾಮ್‌ಶಾಫ್ಟ್ ಇಂಡಿಯಾ ಲಿಮಿಟೆಡ್‌ನಿಂದ ಮೆಷಿನ್ ಶಾಪ್ ಎಂಜಿನಿಯರ್‌ಗಳಾಗಿ ನೇಮಕಗೊಂಡಿದ್ದಾರೆ,…

Read More

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ: ಅವಧಿ ವಿಸ್ತರಣೆ

ಸಪ್ತಸಾಗರ ವಾರ್ತೆ, ವಿಜಯಪುರ,ಜ. 3 : 2025-26ನೇ ಸಾಲಿನಲ್ಲಿ ಬಿ.ಎಡ್ ಕೋರ್ಸಿನ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 15ರವರೆಗ ವಿಸ್ತರಿಸಲಾಗಿದೆ.ವಿದ್ಯಾರ್ಥಿಗಳು ಅರ್ಜಿಯನ್ನು ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲಾತಿಗಳೊಂದಿಗೆ ಹಾರ್ಡ್ ಪ್ರತಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಚೇರಿ ದೂರವಾಣಿ : 083552_295523 ಹಾಗೂ ವಿಜಯಪುರ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕಚೇರಿ ಮೊ.8123710766 ತಾಲೂಕು ಬಸವನ ಬಾಗೇವಾಡಿ…

Read More