ಕಬ್ಬು ಬೆಳೆಗಾರರ ಸಮಸ್ಯೆ ತೀವ್ರ ಸ್ವರೂಪ: ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಪಂಚಪ್ಪ ಕಲಬುರಗಿ ಆಗ್ರಹ

ಹಿಂಗಾರು ಬೆಳೆಗಳಿಗೆ ನೀರು ನಿರಾಕರಿಸುವ ಐಸಿಸಿ ನಿರ್ಣಯ ಹಿಂಪಡೆಯಲು ಒತ್ತಾಯ ಸಪ್ತಸಾಗರ ವಾರ್ತೆ, ವಿಜಯಪುರ, ಅ. 17:ಕಬ್ಬು ಬೆಳೆಗಾರರ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರೈತರ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ರೈತ ಮುಖಂಡ ಪಂಚಪ್ಪ ಕಲಬುರಗಿ ಒತ್ತಾಯಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂಬತ್ತು ವರ್ಷಗಳಿಂದ ಕಬ್ಬಿನ ಕನಿಷ್ಠ ಬೆಂಬಲ ಬೆಲೆ ಪರಿಷ್ಕರಣೆಯಾಗಿಲ್ಲ. ಇದೇ ಅವಧಿಯಲ್ಲಿ ಕೃಷಿ ಕಾರ್ಮಿಕರ…

Read More

ಕಬ್ಬು ಬೆಳೆಗಾರರ ಪರ ಬಿಜೆಪಿ; ಅಗತ್ಯಬಿದ್ದರೆ ಹೋರಾಟಕ್ಕೂ ಸಾಥ್: ನಡಹಳ್ಳಿ

ರಾಜ್ಯ ಸರ್ಕಾರದ ವಿರುದ್ಧ ಕಿಡಿ | ರೈತರ ಸಮಸ್ಯೆ ಪರಿಹರಿಸದೆ ಹೋರಾಟದ ಬಗ್ಗೆ ಮೊಸಳೆ ಕಣ್ಣೀರು ಬೇಡ ಸಪ್ತಸಾಗರ ವಾರ್ತೆ,ವಿಜಯಪುರ, ಅ. 15:ಕಬ್ಬು ಬೆಳೆಗಾರರು ಎದುರಿಸುತ್ತಿರುವ ತೂಕ, ರಿಕವರಿ ಹಾಗೂ ಕಟಾವು ಸೇರಿದಂತೆ ವಿವಿಧ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕು. ರೈತರ ನ್ಯಾಯಯುತ ಬೇಡಿಕೆಗಳ ಪೈಕಿ ಶೇ.70ರಷ್ಟು ಬೇಡಿಕೆಗಳನ್ನು ರಾಜ್ಯ ಸರ್ಕಾರವೇ ಈಡೇರಿಸಬೇಕಿದ್ದು, ಸಮಸ್ಯೆಗಳನ್ನು ಬಗೆಹರಿಸದೆ ರೈತರ ಹೋರಾಟದ ಬಗ್ಗೆ ಮೊಸಳೆ ಕಣ್ಣೀರು ಸುರಿಸುವುದು ಸರಿಯಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಮಾಜಿ…

Read More

ಕಬ್ಬಿಗೆ ನ್ಯಾಯಯುತ ಬೆಲೆ ಆಗ್ರಹಿಸಿ ರೈತರ ಹೋರಾಟ ತೀವ್ರ

ಯಲಗೂರ ಕ್ರಾಸ್‌ನಲ್ಲಿ ಹೆದ್ದಾರಿ ತಡೆ; 700ಕ್ಕೂ ಹೆಚ್ಚು ರೈತರ ಪ್ರತಿಭಟನೆ ಸಪ್ತಸಾಗರ ವಾರ್ತೆ,ವಿಜಯಪುರ, ಅ. 13: ಕಬ್ಬಿಗೆ ನ್ಯಾಯಯುತ ಹಾಗೂ ಲಾಭದಾಯಕ ಬೆಲೆ ನಿಗದಿಪಡಿಸಬೇಕು, ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ.ನಿಡಗುಂದಿ ತಾಲೂಕಿನ ಯಲಗೂರ ಕ್ರಾಸ್ ಬಳಿ ಮಂಗಳವಾರ 700ಕ್ಕೂ ಹೆಚ್ಚು ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಕಬ್ಬಿಗೆ ಹೆಚ್ಚಿನ ದರ ನಿಗದಿಪಡಿಸುವುದು, ಸ್ವಾಮಿನಾಥನ್ ಆಯೋಗದ ಶಿಫಾರಸು ಜಾರಿಗೊಳಿಸುವುದು, ರೈತರ ಸಾಲ ಮನ್ನಾ ಹಾಗೂ…

Read More

ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ

ಸಪ್ತಸಾಗರ ವಾರ್ತೆ,ಬಬಲೇಶ್ವರ, ಅ. 12: ತಾಲೂಕಿನ ಕೃಷ್ಣನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನ ಬಾಯ್ಲರ್ ಅಗ್ನಿ ಪ್ರದೀಪನ ಹಾಗೂ ಕೇನ್ ಕ್ಯಾರಿಯರ್ ಪೂಜಾ ಕಾರ್ಯಕ್ರಮ ಸೋಮವಾರ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರ್ಖಾನೆ ಅಧ್ಯಕ್ಷ ಕುಮಾರ ಚಂದ್ರಕಾಂತ ದೇಸಾಯಿ (ಜೈನಾಪುರ) ಮಾತನಾಡಿ, ಪ್ರಸಕ್ತ ಹಂಗಾಮಿನಲ್ಲಿ 10 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ. ರೈತರು ಹೆಚ್ಚಿನ ಪ್ರಮಾಣದಲ್ಲಿ ಕಬ್ಬನ್ನು ಕಾರ್ಖಾನೆಗೆ ಕಳುಹಿಸಬೇಕು. ಮುಂಬರುವ ದಿನಗಳಲ್ಲಿ ಹೊಸ ಕಾರ್ಖಾನೆಗೆ ಚಾಲನೆ…

Read More

ಕಬ್ಬು ನುರಿಸುವ ಸಾಮರ್ಥ್ಯ 12 ಸಾವಿರ ಟಿಸಿಡಿಗೆ ಹೆಚ್ಚಳ: ಸಾರ್ವಜನಿಕ ಸಭೆಯಲ್ಲಿ ರೈತರ ಬೆಂಬಲ

ಸಪ್ತಸಾಗರ ವಾರ್ತೆ,ಚಡಚಣ, ಜು. 24: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಾವಿನಾಳ ಗ್ರಾಮದಲ್ಲಿರುವ ಶ್ರೀ ದತ್ತ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಯ ಕಬ್ಬು ನುರಿಸುವ ಸಾಮರ್ಥ್ಯ ಹೆಚ್ಚಳ ಯೋಜನೆ ಕುರಿತು ಸಾರ್ವಜನಿಕ ಸಭೆ ಬುಧವಾರ ಕಾರ್ಖಾನೆ ಆವರಣದಲ್ಲಿ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಮ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಯೋಜನೆಗೆ ವ್ಯಾಪಕ ಬೆಂಬಲ ವ್ಯಕ್ತಪಡಿಸಿದರು.ಸಭೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವಿಜಯಪುರ ಪ್ರಾದೇಶಿಕ ಅಧಿಕಾರಿ ಎಸ್. ರಮೇಶ್ ಮಾತನಾಡಿ,…

Read More

ಕಬ್ಬಿನ ಪಡಕ್ಕೆ ಬೆಂಕಿ:ಓರ್ವ ವ್ಯಕ್ತಿ ಸಜೀವ ದಹನ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 16:ಕಬ್ಬಿನ ಗದ್ದೆಗೆ ಬಿದ್ದ ಬೆಂಕಿ ನಂದಿಸಲು ಹೋದ ವ್ಯಕ್ತಿಯೊಬ್ಬ ಸಜೀವ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಬನಹಟ್ಟಿ ಪಿಎ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.ಇಲ್ಲಿನ ಮಲ್ಲನಗೌಡ ಬಿರಾದಾರ ಉರ್ಫ್ ಮೇಲಿನಮನಿ ಸಜೀವ ದಹನಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.ಮಲ್ಲನಗೌಡ ಬಿರಾದಾರ ಅವರಿಗೆ ಸೇರಿದ ಹೊಲದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಕಬ್ಬಿನ ಪಡಕ್ಕೆ ವ್ಯಾಪಿಸಿದೆ. ಆಗ ಇದನ್ನು ಕಂಡ ಮಲ್ಲನಗೌಡ ಅವರು ಬೆಂಕಿ ನಂದಿಸಲು ಹೋದ ವೇಳೆ…

Read More