
ಆರ್ಥಿಕ ಅಭಿವೃದ್ಧಿಯಲ್ಲಿ ರೈತರು ಮತ್ತು ಕೃಷಿಯ ಪಾತ್ರ ಮುಖ್ಯ: ಸುನೀಲಗೌಡ ಪಾಟೀಲ
ಸಪ್ತಸಾಗರ ವಾರ್ತೆ,ವಿಜಯಪುರ, ಆ. 25: ಆರ್ಥಿಕ ಅಭಿವೃದ್ಧಿಯಲ್ಲಿ ರೈತರು ಮತ್ತು ಕೃಷಿಯ ಪಾತ್ರ ಮುಖ್ಯವಾಗಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಸೋಮವಾರ ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿ ಗ್ರಾಮದಲ್ಲಿ ನೂತನ ಶ್ರೀ ನಂದಿ ಬಸವೇಶ್ವರ ದೇವಸ್ಥಾನ ಉದ್ಘಾಟನೆ ಮತ್ತು ಕಳಸಾರೋಹಣದ ಅಂಗವಾಗಿ ಆಯೋಜಿಸಲಾಗಿದ್ದ ಕುಂಭಮೇಳ ಹಾಗೂ ಧರ್ಮಸಭೆ ಉದ್ಘಾಟಿಸಿ ಅವರು ಮಾತನಾಡಿದರು.ಸಚಿವ ಎಂ. ಬಿ. ಪಾಟೀಲ ಅವರು ಮಾಡಿರುವ ನೀರಾವರಿಯಿಂದಾಗಿ ಜಿಲ್ಲೆಯ ಚಿತ್ರಣ ಬದಲಾಗಿದೆ. ವಿಜಯಪುರ ರಾಜ್ಯದಲ್ಲಿ ಶ್ರೀಮಂತ ಜಿಲ್ಲೆಗಳಲ್ಲಿ ಒಂದಾಗುವ ಕಾಲ ಬಂದಿದೆ. ನೀರಾವರಿಯಿಂದಾಗಿ…