ಸುಪ್ರೀಂಕೋರ್ಟ್ ತೀರ್ಪಿನಿಂದ ವಿಜಯಪುರ ವಿಮಾನ ನಿಲ್ದಾಣ ಆರಂಭಕ್ಕೆ ಹಸಿರು ನಿಶಾನೆ

ಪರಿಸರ ಅನುಮತಿ ದೊರೆತರೆ ಮೂರು ತಿಂಗಳಲ್ಲಿ ವಿಮಾನ ಹಾರಾಟ ಆರಂಭ: ಎಂ.ಬಿ. ಪಾಟೀಲ ಸಪ್ತಸಾಗರ ವಾರ್ತೆ,ಬೆಂಗಳೂರು, ಜು. 29: ಬಹುನಿರೀಕ್ಷಿತ ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭಕ್ಕೆ ಇದ್ದ ಪ್ರಮುಖ ಕಾನೂನು ತೊಡಕು ನಿವಾರಣೆಯಾಗಿದ್ದು, ಸುಪ್ರೀಂಕೋರ್ಟ್ ನೀಡಿರುವ ಮಹತ್ವದ ತೀರ್ಪಿನಿಂದ ಯೋಜನೆಗೆ ಹೊಸ ಚೈತನ್ಯ ಸಿಕ್ಕಿದೆ. ಪರಿಸರ ಸಂಬಂಧಿತ ಅಂತಿಮ ಅನುಮತಿ ನಿರೀಕ್ಷೆಯಂತೆ ದೊರೆತರೆ ಮುಂದಿನ ಮೂರು ತಿಂಗಳೊಳಗೆ ವಿಜಯಪುರ ವಿಮಾನ ನಿಲ್ದಾಣವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸುವ ವಿಶ್ವಾಸವಿದೆ ಎಂದು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ…

Read More

ಸುಪ್ರೀಂ ಕೋರ್ಟ್ ನ ಅಂಗಳದಲ್ಲಿಯೂ ಕಾಂಗ್ರೆಸ್ ಮುಖಂಡ ಮುಶ್ರೀಫ್ ಗೆ ಮುಖಭಂಗ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 14:ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ವಿಜಯಪುರ ನಗರ ಕ್ಷೇತ್ರದಲ್ಲಿ ಅಕ್ರಮ ಆರೋಪ ಮಾಡಿ ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ಪ್ರಶ್ನೆ ಮಾಡಿದ್ದ ಮುಶ್ರೀಫ್ ಗೆ ಹೈಕೋರ್ಟ್ ಅರ್ಜಿ ವಜಾ ಮಾಡಿ ದಂಡ ವಿಧಿಸುವ ಮೂಲಕ ಕಾಂಗ್ರೆಸ್ ಮುಖಂಡ ಮುಶ್ರೀಫ್ ಮುಖಭಂಗಕ್ಕೆ ಒಳಗಾಗಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಸುಪ್ರೀಂ ಕೋರ್ಟ್ ಅವರ ಅರ್ಜಿ ವಜಾ ಮಾಡಿದ್ದು ಎರಡನೇ ಬಾರಿ ಮುಶ್ರೀಫ್ ಅವರು ಮುಖಭಂಗ ಅನುಭವಿಸುವಂತಾಗಿದೆ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ…

Read More

ದ್ವೇಷ ಭಾಷಣ ವಿಧೇಯಕ ಮಂಡನೆ: ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ-ಯತ್ನಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 20:ಸುಪ್ರೀಂ ಕೋರ್ಟ್ ನಲ್ಲಿ ದ್ವೇಷ ಭಾಷಣ ವಿಧೇಯಕ ಮಂಡನೆ ವಿರುದ್ಧ ಪ್ರಶ್ನೆ ಮಾಡುತ್ತೇವೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯಪಾಲರಿಗೂ ಈ ಕುರಿತು ಮನವಿ ಸಲ್ಲಿಸುತ್ತೇವೆ ಎಂದು ಹೇಳಿದರು.ಈಗಾಗಲೇ ಸಂವಿಧಾನದಲ್ಲಿ ಮಾತನಾಡುವ ಹಕ್ಕನ್ನು ನೀಡಲಾಗಿದೆ.19/ A ಕಲಂನಲ್ಲಿ ಅಭಿವ್ಯಕ್ತಿ ಸ್ವಾತಂತ್ಯ ಹಕ್ಕು ನೀಡಲಾಗಿದೆ. ದ್ವೇಷ ಭಾಷಣ ವಿಧೇಯಕ ಇದಕ್ಕೆ ತದ್ವಿರುದ್ಧವಾಗಿದೆ. ಹೀಗಾಗಿ ನಾವು ಇದನ್ನು ಸುಪ್ರೀಂ ಕೋರ್ಟ್ ನಲ್ಲಿ…

Read More

ಭಾರತ ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಮರು ಪರಾಮರ್ಶೆಗೆ ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 15:ಕಳೆದ ಕೆಲವು ದಿನಗಳ ಹಿಂದೆ ಭಾರತ ಸರ್ವೋಚ್ಚ ನ್ಯಾಯಾಲಯವು ತಂದೆ ಪರಿಶಿಷ್ಟ ಜಾತಿ ಅಲ್ಲದಿದ್ದರೂ ತಾಯಿ ಪರಿಶಿಷ್ಟ ಜಾತಿ ಸೇರಿದ್ದರೆ ಶೈಕ್ಷಣಿಕ ಉದ್ದೇಶಕ್ಕಾಗಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಒದಗಿಸಬೇಕೆಂದು ಆದೇಶ ನೀಡಿದ್ದನ್ನು ಸುಪ್ರೀಂ ಕೋರ್ಟ್ ಮತ್ತೆ ಪರಾಮರ್ಶಿಸಬೇಕು ಎಂದು ಭೀಮ ಸರಕಾರ ಸಂಘಟನೆ ಮನವಿ ಸಲ್ಲಿಸಿದೆ.ಈ ತೀರ್ಪಿನಿಂದ ನಿಜ ಪರಿಶಿಷ್ಟ ಜಾತಿ ಜನರಿಗೆ ಅನ್ಯಾಯಾಗುತ್ತದೆ. ಜೊತೆಗೆ ಸರ್ವೋಚ್ಛ ನ್ಯಾಯಾಲಯದ ಆದೇಶ ದುರುಪಯೋಗ ಆಗುವ ಸಾಧ್ಯತೆ ಇದ್ದು, ಈ ನ್ಯಾಯಾಲಯದ ಆದೇಶವನ್ನು…

Read More

ಒಳ ಮೀಸಲಾತಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಬೃಹತ್ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 1 : ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಶೀಘ್ರವೇ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಮುತ್ತಿಗೆ ಹಾಕುವ ಕರೆ ಮೇರೆಗೆ ಶುಕ್ರವಾರ ವಿಜಯಪುರದಲ್ಲಿಯೂ ವಿವಿಧ ಮಾದಿಗ ಸಮುದಾಯಗಳ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ವಿಜಯಪುರದಲ್ಲಿಯೂ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ತಮ್ಮ ಹಕ್ಕೊತ್ತಾಯ ಮಂಡಿಸಿದರು. ಒಳಮೀಸಲಾತಿ ಜಾರಿಗೊಳಸಲೇಬೇಕು ಎಂಬ ಘೋಷಣೆಗಳನ್ನು ಕೂಗಿದರು.ನಗರದ ಡಾ.ಬಿ.ಆರ್. ಅಂಬೇಡ್ಕರ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ರ‍್ಯಾಲಿ ವಿವಿಧ ಪ್ರಮುಖ…

Read More