ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ
ಸಪ್ತಸಾಗರ ವಾರ್ತೆ ಬೆಂಗಳೂರು, ಜೂ.09:ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಅಧಿಕಾರಕ್ಕಿಂತ ಸಂಘಟನೆಗೆ ಆದ್ಯತೆ ನೀಡಿದ್ದ ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರಿಗೆ ಮಂಗಳವಾರ ಸರಕಾರಿ ಗೌರವಗಳೊಂದಿಗೆ ಭಾವಪೂರ್ಣ ಅಂತಿಮ ವಿದಾಯ ಸಲ್ಲಿಸಲಾಯಿತು.ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೂರಜ್ ಹೆಗ್ಡೆ ಅವರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಡಿ.ಕೆ. ಶಿವಕುಮಾರ್, ಕೆಪಿಸಿಸಿ…


