7 ತಿಂಗಳಿಂದ ಸ್ಥಗಿತಗೊಂಡ ಪಿಂಚಣಿ ಕೂಡಲೇ ಪುನರಾರಂಭಿಸಿ
ಬಾಕಿ ಮೊತ್ತ ಬಿಡುಗಡೆಗೆ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ ಆಗ್ರಹ ಸಪ್ತಸಾಗರ ವಾರ್ತೆ,ವಿಜಯಪುರ, ಅ.1: ಕಳೆದ ಸುಮಾರು ಏಳು ತಿಂಗಳಿಂದ ಸ್ಥಗಿತಗೊಂಡಿರುವ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳನ್ನು ಕೂಡಲೇ ಪುನರಾರಂಭಿಸಿ, ಅರ್ಹ ಫಲಾನುಭವಿಗಳಿಗೆ ಬಾಕಿ ಇರುವ ಪಿಂಚಣಿ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.) ಬೆಂಗಳೂರು–ವಿಜಯಪುರ ಜಿಲ್ಲಾ ಘಟಕ ಆಗ್ರಹಿಸಿದೆ.ಈ ಕುರಿತು ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಮನವಿ…


