
ಸಚಿವ ಸತೀಶ ಜಾರಕಿಹೊಳಿ ಸ್ವಪ್ನ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಗೆ ಭೇಟಿ
ಸಪ್ತಸಾಗರ ವಾರ್ತೆ,ವಿಜಯಪುರ, ಜು. 22:ನಗರದ ಆಶ್ರಮ ರಸ್ತೆಯಲ್ಲಿರುವ ಸ್ವಪ್ನ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಗೆ ಮಂಗಳವಾರ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ ಮಕ್ಕಳ ಕಲಿಕಾ ಪರಿಸ್ಥಿತಿಗಳ ಬಗ್ಗೆ ವಿಚಾರಿಸಿದರು.ತರಗತಿ ಕೊಠಡಿ, ಲ್ಯಾಬ್, ಗ್ರಂಥಾಲಯ ಸೇರಿದಂತೆ ವಿವಿಧ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು, ಅಧ್ಯಾಪಕರು ಹಾಗೂ ಸಿಬ್ಬಂದಿಗಳಿಂದ ಮಾಹಿತಿ ಪಡೆದರು.ವಿದ್ಯಾರ್ಥಿಗಳ ಅಭಿಪ್ರಾಯ, ಅಗತ್ಯವಿರುವ ಸೌಲಭ್ಯ ಹಾಗೂ ಸಮಸ್ಯೆಗಳ ಬಗ್ಗೆ ಆಲಿಸಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಣ, ಕನಸುಗಳ ಬಗ್ಗೆ ಹಂಚಿಕೊಂಡಾಗ ವಿದ್ಯಾರ್ಥಿಗಳ…