ತಾಳಿಕೋಟೆ ತಾಲೂಕಿನ ಪಡೇಕನೂರ ಗ್ರಾಮದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ ರಿಷಿ ಆನಂದ
ಸಪ್ತಸಾಗರ ವಾರ್ತೆ,ವಿಜಯಪುರ, ಮಾ.11:ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು ಎಂದು ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ತಾಳಿಕೋಟೆ ತಾಲೂಕಿನ ಕೊಣ್ಣೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಡೇಕನೂರ ಗ್ರಾಮದ ಅಂಗನವಾಡಿಗೆ ಭೇಟಿ ನೀಡಿದ ಅವರು, ಅಂಗನವಾಡಿ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ, ಮಕ್ಕಳ ಕಲಿಕಾ ಸಾಮರ್ಥ್ಯ ಗುಣಮಟ್ಟ ಹೆಚ್ಚಿಸಿ ಕಲಿಕೆಗೆ ಆದ್ಯತೆ ನೀಡಬೇಕು. ಅಡುಗೆ ಕೊಠಡಿ ಸ್ವಚ್ಚತೆಗೆ ನಿರಂತರ ಶುಚಿತ್ವ ಕಾಪಾಡಬೇಕು. ಸಿಬ್ಬಂದಿ ಹಾಗೂ ಮಕ್ಕಳ ಹಾಜರಾತಿ,…


