
ಗುರು ನಮನ ಹಾಗೂ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ
ಸಪ್ತಸಾಗರ ವಾರ್ತೆ,ವಿಜಯಪುರ, ಜು. 19:ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ವಿಜಯಪುರ ಜಿಲ್ಲಾ ಘಟಕದಿಂದ ಜು.20 ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಗುರು ನಮನ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.ಬೆಳಿಗ್ಗೆ 10 ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಬಾಲಗಾಂವ ಅಮೃತಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಪಾಧ್ಯಕ್ಷ ಹಾಗೂ ಎಕ್ಸ್ಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಸವರಾಜ ಕೌಲಗಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಹುಶ್ರುತ ವಿದ್ವಾಂಸ, ಪತ್ರಕರ್ತ,ನಾಟಕಕಾರ,…