ನೀರಿಗಾಗಿ ಖಾಲಿ ಕೊಡಗಳೊಂದಿಗೆ ತೆಗ್ಗೆಹಳ್ಳಿ ಮಹಿಳೆಯರ ಪ್ರತಿಭಟನೆ

ಸಪ್ತಸಾಗರ ವಾರ್ತೆ,ಇಂಡಿ, ಜೂ. 20: ತಾಲೂಕಿನ ತೆಗ್ಗೆಹಳ್ಳಿ ಗ್ರಾಮದ ಹೊಸ ಊರಿನಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ನೂರಾರು ಮಹಿಳೆಯರು ಖಾಲಿ ಕೊಡಗಳೊಂದಿಗೆ ಆಡಳಿತ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ತೆಗ್ಗೆಹಳ್ಳಿ ಗ್ರಾಮದ ಹೊಸ ಊರಿನಲ್ಲಿ ಸುಮಾರು 300 ಕುಟುಂಬಗಳು ವಾಸವಾಗಿದ್ದು, ಕುಡಿಯುವ ನೀರಿಗಾಗಿ ಕೇವಲ ಒಂದು ಬಾವಿಯನ್ನೇ ಅವಲಂಬಿಸಬೇಕಾಗಿದೆ. ಈ ಬಾವಿಯಿಂದ ದಿನಕ್ಕೆ ಕೇವಲ 15 ನಿಮಿಷಗಳ ಕಾಲ ಮಾತ್ರ ನೀರು ಪೂರೈಕೆಯಾಗುತ್ತಿದೆ. ನಂತರ ನೀರಿನ ಅಗತ್ಯಕ್ಕಾಗಿ ಗ್ರಾಮಸ್ಥರು ಸುತ್ತಮುತ್ತಲಿನ ತೋಟಗಳಿಗೆ ತೆರಳಿ…

Read More