ನಿಗದಿತ ಸಮಯಕ್ಕೆ ಕಚೇರಿಯಲ್ಲಿರಲು ಜಿಲ್ಲಾಧಿಕಾರಿ ಖಡಕ್ ಸೂಚನೆ:ಜಿಲ್ಲೆಯಲ್ಲಿ ತಾಪಮಾನ ಹಿನ್ನೆಲೆ ಬದಲಾದ ಸರ್ಕಾರಿ ಕಚೇರಿ ಸಮಯ
ಸಪ್ತಸಾಗರ ವಾರ್ತೆ,ವಿಜಯಪುರ, ಏ.1: 2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನ ಹಿನ್ನೆಲೆಯಲ್ಲಿ ಏಪ್ರಿಲ್ 1 ರಿಂದ ಜಿಲ್ಲೆಯಲ್ಲಿ ಸರಕಾರಿ ಕಚೇರಿ ಸಮಯ ಬದಲಾವಣೆಯಾಗುತ್ತಿದ್ದಂತೆಯೇ, ಬುಧವಾರ ಬೆಳಗ್ಗೆಯೇ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಸೇರಿದಂತೆ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲಿಸಿ,ಅಧಿಕಾರಿ, ಸಿಬ್ಬಂದಿ ಹಾಜರಾತಿ ಪರಿಶೀಲಿಸಿದರು.ಕಚೇರಿ ಸಮಯ ಬದಲಾವಣೆ ಹಿನ್ನೆಲೆಯಲ್ಲಿ ಬುಧವಾರ ನಗರದ ವಿವಿಧ ಇಲಾಖೆಗಳ ಕಚೇರಿಗೆ ದಿಢೀರ್ ಭೇಟಿ ನೀಡಿ, ಸಿಬ್ಬಂದಿ…


