ಸಚಿವ ಎಂ. ಬಿ. ಪಾಟೀಲ ಟೆಂಪಲ್ ರನ್
ಸಪ್ತಸಾಗರ ವಾರ್ತೆ ವಿಜಯಪುರ, ಜೂ. 8:ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ರವಿವಾರ ನಾನಾ ಧಾರ್ಮಿಕ ಸ್ಥಳಗಳಿಗೆ ತೆರಳಿ ಪೂಜೆ ಸಲ್ಲಿಸಿದರು.ನೂತನ ಸಂಪುಟದಲ್ಲಿ ಸಚಿವರಾದ ನಂತರ ಇದೇ ಮೊದಲ ಬಾರಿಗೆ ತವರು ಜಿಲ್ಲೆ ವಿಜಯಪುರಕ್ಕೆ ಆಗಮಿಸಿದ ಅವರು, ತಿಕೋಟಾ ತಾಲೂಕಿನ ಮುಮ್ಮೆಟ್ಟಿಗುಡ್ಡದಲ್ಲಿರುವ ಶ್ರೀ ಅಮೋಘಸಿದ್ಧೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಮೋಘಸಿದ್ಧೇಶ್ವರ ದೇವಸ್ಥಾನ ತನ್ನ ಐತಿಹಾಸಿಕ ಹಿನ್ನೆಲೆ ಹಾಗೂ ಧಾರ್ಮಿಕ…


