
ಜಿಲ್ಲಾ ಗ್ರಂಥಾಲಯಗಳಿಗೆ ಪಠ್ಯಪುಸ್ತಕ ಒದಗಿಸಲು ಮನವಿ
ಸಪ್ತಸಾಗರ ವಾರ್ತೆ ವಿಜಯಪುರ,ಆ. 30:ನಗರ ಕೇಂದ್ರ ಗ್ರಂಥಾಲಯಕ್ಕೆ ತ್ವರಿತ ಗತಿಯಲ್ಲಿ ಪಠ್ಯಪುಸ್ತಕಗಳನ್ನು ಒದಗಿಸಬೇಕು ಎಂದು ಕರ್ನಾಟಕ ನವ ನಿರ್ಮಾಣ ವೇದಿಕೆ ಘಟಕ ಹಾಗೂ ವಿಜಯಪುರ ಜಿಲ್ಲಾ ಘಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿಗಳಿಗೆ ಶನಿವಾರ ಮನವಿ ಸಲ್ಲಿಸಲಾಯಿತು.ವೇದಿಕೆಯ ರಾಜ್ಯಾಧ್ಯಕ್ಷ ಶೇಷರಾವ ಮಾನೆ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕೆ. ಆನಂದ ಅವರಿಗೆ ಮನವಿ ಸಲ್ಲಿಸಲಾಯಿತು.ಗೌರವ ಅಧ್ಯಕ್ಷ, ನ್ಯಾಯವಾದಿ ಎಂ.ಎಂ. ಖಲಾಸಿ ಮಾತನಾಡಿ, ಪ್ರಸಕ್ತ ಸಾಲಿಗಾಗಿ ಕರ್ನಾಟಕ ಸರಕಾರವು ಪುಸ್ತಕ ಖರೀದಿಗಾಗಿ ಬಿಡುಗಡೆ ಮಾಡಿದ ಅನುದಾನ ಸದ್ಭಳಕೆಯಾಗದೆ ಜಿಲ್ಲೆಯ ಸಮಸ್ತ…