ಕನ್ನಡದ ನೆಲದಲ್ಲಿಯೇ ಕನ್ನಡದ ಉಳಿವಿಗಾಗಿ ಸಂಘಟನೆಗಳ ಹುಟ್ಟು ದುರದೃಷ್ಟಕರ: ಸುರೇಶ ಜತ್ತಿ ವಿಷಾದ
It is unfortunate that organizations have to be formed for the survival of Kannada in the very land of Kannada: Suresh Jatti expressed regret.
It is unfortunate that organizations have to be formed for the survival of Kannada in the very land of Kannada: Suresh Jatti expressed regret.
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 22: ಜಿಲ್ಲೆಯ ತಿಕೋಟಾ ಹಾಗೂ ಬಬಲೇಶ್ವರ ಪಟ್ಟಣ ಪಂಚಾಯತಿಗಳ ಪುನರ್ ವಿಂಗಡಣೆ ಮಾಡಿ, ಉಪವಿಭಾಗಾಧಿಕಾರಿಗಳು ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದು, ಈ ಅಧಿಸೂಚನೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.ಪಟ್ಟಣ ಪಂಚಾಯತಿಗಳ ಪುನರ್ ವಿಂಗಡಣೆ ಮಾಡಿ ಹೊರಡಿಸಿದ ಅಧಿಸೂಚನೆಗೆ ಏನಾದರೂ ಆಕ್ಷೇಪಣೆಗಳು ಅಥವಾ ಸಲಹೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಉಪವಿಭಾಗಾಧಿಕಾರಿಗಳು ವಿಜಯಪುರ ಇವರಿಗೆ ದಿನಾಂಕ 04-10-2025ರೊಳಗಾಗಿ ಸಲ್ಲಿಸಬಹುದಾಗಿದೆ. ನಿಗದಿತ ಅವಧಿ ಮೀರಿ ಬಂದ ಯಾವುದೇ ಸಲಹೆ ಹಾಗೂ ಆಕ್ಷೇಪಣೆಗಳನ್ನು ಪುರಸ್ಕರಿಸಲಾಗುವುದಿಲ್ಲ. ಎಲ್ಲ ಆಕ್ಷೇಪಣೆ ಹಾಗೂ ಸಲಹೆಗಳನ್ನು ಪರಿಶೀಲಿಸಿದ ನಂತರ…
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 18 :ಸೆ. 21ರಿಂದ ಮೂರು ದಿನಗಳ ಕಾಲಜಿಲ್ಲೆಯ ತಿಕೋಟಾದ ಕನಕದಾಸ ಭವನದಲ್ಲಿ ರಾಜ್ಯಮಟ್ಟದ ದ್ರಾಕ್ಷಿ ವಿಚಾರ ಸಂಕಿರಣ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಪ್ರಾದೇಶಿಕ ಸಂಘದ ಅಧ್ಯಕ್ಷ ಅಭಯಕುಮಾರ ನಾಂದ್ರೇಕರ ತಿಳಿಸಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ದ್ರಾಕ್ಷಿ ಬೆಳೆಗಾರರು ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ಅನೇಕ ತೆರನಾದ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳ ನಿವಾರಣೆಗೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಬೇಕಾಗಿರುವುದು ಅಗತ್ಯವಾಗಿದೆ, ಈ ನಿಟ್ಟಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಸಮಗ್ರ ಚಿಂತನ-ಮಂಥನ ನಡೆಸಲಾಗುವುದು. ಕರ್ನಾಟಕ…
ಸಪ್ತಸಾಗರ ವಾರ್ತೆ, ವಿಜಯಪುರ, ಆ.16: ಜಿಲ್ಲೆಯ ತಿಕೋಟಾ ತಾಲೂಕಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ. ಕೆ ಅವರು ಶನಿವಾರ ಭೇಟಿ ನೀಡಿ, ತಾಲೂಕಾ ಆಡಳಿತದ ಕಾರ್ಯ ನಿರ್ವಹಣೆಯ ಪ್ರಗತಿ ಪರಿಶೀಲನೆ ನಡೆಸಿದರು.ತಹಶೀಲ್ದಾರ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಬಾಕಿ ಕಡತಗಳ ಪರಿಶೀಲನೆ, ನ್ಯಾಯಾಲಯ ಪ್ರಕರಣಗಳ ಕಡತ, ಆಧಾರ ನೋಂದಣಿ, ಕಂದಾಯ ಗ್ರಾಮಗಳ ಮಾಹಿತಿ, ಭೂಮಿ ಪ್ರಗತಿ, ಮೋಜಣಿ ಕಡತ ಪ್ರಗತಿ ಮಾಹಿತಿ, ಪ್ರಮಾಣ ಪತ್ರಗಳ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು. ಇ ಪೌತಿ ಖಾತೆ ಪ್ರಗತಿ,…
ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರ ಬಳಿ ಸುಮಾರು 400 ಎಕರೆ ಪ್ರದೇಶದಲ್ಲಿ ರೂ. 557 ಕೋ. ವೆಚ್ಚದಲ್ಲಿ 0.77 ಟಿಎಂಸಿ ಜಲಸಂಗ್ರಹ ಸಾಮರ್ಥ್ಯದ ಜಲಾಶಯ ನಿರ್ಮಿಸಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ಪಟ್ಟಣದ ಕೊರಬುಗಲ್ಲಿಯಲ್ಲಿ ಮಲಕನದೇವರಹಟ್ಟಿ ಇಟರಾಯನಗುಡಿ ಕೂಡು ರಸ್ತೆಯಿಂದ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆ ವರೆಗೆ ಅಂದಾಜು ರೂ. 495 ಲಕ್ಷ ವೆಚ್ಚದಲ್ಲಿ 5.20…
ಸಪ್ತಸಾಗರ ವಾರ್ತೆ ವಿಜಯಪುರ, ಜು. 17:ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ವಾರಸುದಾರರ ಖಾತೆ ಬದಲಾವಣೆ ಮಾಡಲು ಪೌತಿ-ವಾರಸಾ ಖಾತೆ ಆಂದೋಲನವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ತಿಳಿಸಿದ್ದಾರೆ.ಮಾಲೀಕತ್ವವು ಮೃತರ ವಾರಸುದಾರರ ಹೆಸರಿಗೆ ಬದಲಾವಣೆಯಾಗದಿದ್ದಲ್ಲಿ, ಉಂಟಾಗುವ ಸಮಸ್ಯೆಗಳನ್ನು ಪರಿಹರಿಸಲು ಪೌತಿ-ವಾರಸಾ ಸ್ವರೂಪದ ಮ್ಯುಟೇಷನ್ ಪ್ರಕ್ರಿಯೆಯನ್ನು ಸರಳೀಕೃತಗೊಳಿಸಿ ಪೌತಿ-ವಾರಸಾ ಖಾತೆ ಆಂದೋಲನ ನಡೆಸಲಾಗುತ್ತಿದೆ. ಅಂತಹ ವಾರಸುದಾರರಿಗೆ ಸರ್ಕಾರದಿಂದ ಸಿಗಬಹುದಾದ ಹಲವಾರು ಪ್ರಯೋಜನಗಳಿಂದ ಹಾಗೂ ಜಮೀನು ಅಭಿವೃದ್ಧಿಗೆ ಸಂಬಂಧಿಸಿದ ಸಾಲ…
ಸಪ್ತಸಾಗರ ವಾರ್ತೆ,ವಿಜಯಪುರ, ಜು. 16:ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಜು..18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಅಂದು ಬೆಳಗ್ಗೆ 9ಗಂಟೆಗೆ ಸಚಿವರ ಗೃಹ ಕಚೇರಿಯಲ್ಲಿ ದಿ ನ್ಯೂ ಯಾರ್ಕ್ ಟೈಮ್ಸ್ ವರದಿಗಾರರೊಂದಿಗೆ ಸಂದರ್ಶನ ನೀಡಲಿದ್ದಾರೆ.ಮಧ್ಯಾಹ್ನ 12ಗಂಟೆಗೆ ಡಿಸಿಸಿ ಬ್ಯಾಂಕ್ ಹತ್ತಿರ ಆಲಕುಂಟೆ ನಗರದಲ್ಲಿ ಆಯೋಜಿಸಲಾದ ಉತ್ತರ ಕರ್ನಾಟಕ ಶಾಮಿಯಾನ ಸಂಘದ ವತಿಯಿಂದ 4ನೇ ಮಹಾ ಅಧಿವೇಶನ ಹಾಗೂ ಮಳಿಗೆಗಳ ಪ್ರದರ್ಶನ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ.ನಂತರ ಮಧ್ಯಾಹ್ನ 3ಗಂಟೆಗೆ ತಿಕೋಟಾ…