ತಿಕೋಟ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಗೊಂದಲ:ಪರೀಕ್ಷಾ ಮಂಡಳಿಗೆ ವರದಿ ಸಲ್ಲಿಕೆ-ಡಿಸಿ ಆನಂದ ಕೆ.

ಸಪ್ತಸಾಗರ ವಾರ್ತೆ,ವಿಜಯಪುರ, ಆ.2:ವಿಜಯಪುರ ಜಿಲ್ಲೆಯ ತಿಕೋಟ ಪಟ್ಟಣದ ಶಾರದಾಂಬಾ ಶಿಕ್ಷಣ ಸಂಸ್ಥೆಯಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಲಿಖಿತ ಪರೀಕ್ಷಾ ಕೇಂದ್ರದಲ್ಲಿ ಭಾನುವಾರ ಕೆಲಕಾಲ ಗೊಂದಲ ಉಂಟಾಯಿತು. ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಶೀಟ್‌ನ ಕ್ರಮಸಂಖ್ಯೆ ಹೊಂದಿಕೆಯಾಗಿಲ್ಲ ಎಂದು ಆರೋಪಿಸಿ ಕೆಲ ಪರೀಕ್ಷಾರ್ಥಿಗಳು ಪರೀಕ್ಷೆಯನ್ನು ಬಹಿಷ್ಕರಿಸಿ ಒಎಂಆರ್ ಶೀಟ್ ಮತ್ತು ಪ್ರಶ್ನೆ ಪತ್ರಿಕೆಗಳೊಂದಿಗೆ ಕೇಂದ್ರದ ಹೊರಗೆ ಬಂದು ಪ್ರತಿಭಟನೆ ನಡೆಸಿದರು.ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸ್ಪಷ್ಟನೆ ನೀಡಿ, ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಶೀಟ್‌ಗಳನ್ನು ನಿಗದಿತ…

Read More

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಅವ್ಯವಸ್ಥೆ: ತಿಕೋಟದಲ್ಲಿ ಪರೀಕ್ಷಾರ್ಥಿಗಳ ಆಕ್ರೋಶ, ಮರು ಪರೀಕ್ಷೆಗೆ ಒತ್ತಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪ್ರವೇಶ ಪರೀಕ್ಷೆ ವೇಳೆ ವಿಜಯಪುರ ಜಿಲ್ಲೆಯ ತಿಕೋಟ ಪಟ್ಟಣದ ಪರೀಕ್ಷಾ ಕೇಂದ್ರದಲ್ಲಿ ಭಾರೀ ಗೊಂದಲ ಉಂಟಾಗಿ, ನೂರಾರು ಪರೀಕ್ಷಾರ್ಥಿಗಳು ಪರೀಕ್ಷೆಗೆ ಬಹಿಷ್ಕಾರ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ನಡೆದಿದೆ.ತಿಕೋಟದ ಕೋಟ್ಯಾಳ ರಸ್ತೆಯಲ್ಲಿರುವ ಶಾರದಾಂಬಾ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಬೆಳಿಗ್ಗೆ 10.30ಕ್ಕೆ ಆರಂಭವಾಗಬೇಕಿದ್ದ ಪರೀಕ್ಷೆಗೆ ಪ್ರಶ್ನೆಪತ್ರಿಕೆ ಅರ್ಧ ಗಂಟೆ ತಡವಾಗಿ, ಸುಮಾರು 11 ಗಂಟೆಗೆ ವಿತರಿಸಲಾಗಿದೆ ಎಂದು ಪರೀಕ್ಷಾರ್ಥಿಗಳು ಆರೋಪಿಸಿದರು.ಇದರ ಜೊತೆಗೆ ಪ್ರಶ್ನೆಪತ್ರಿಕೆ ಮತ್ತು ಓಎಂಆರ್ ಶೀಟ್‌ಗಳ…

Read More

ತಿಕೋಟ- ಬಬಲೇಶ್ವ ತಾಲೂಕಿನ ವಿವಿಧ ಕಚೇರಿಗಳಿಗೆ ಡಿಸಿ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 10:ವಿವಿಧ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ಸಕಾಲಕ್ಕೆ ವಿತರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ಬುಧವಾರ ಬಬಲೇಶ್ವರ ತಾಲೂಕಿನ ಮಮದಾಪುರ ನಾಡಕಚೇರಿಯ ಅಟಲ್‌ ಜನಸ್ನೇಹಿ ಕೇಂದ್ರದಲ್ಲಿ ನೀಡಲಾಗುವ ವಿವಿಧ ಪ್ರಮಾಣ ಪತ್ರಗಳ ಹಾಗೂ ಪಿಂಚಣಿ ಯೋಜನೆಗಳನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ಅಟಲ್‌ ಜನಸ್ನೇಹಿ ಕೇಂದ್ರದಲ್ಲಿ ನೀಡಲಾಗುವ ವಿವಿಧ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ಸಕಾಲಕ್ಕೆ ವಿತರಿಸಬೇಕು ಎಂದು ಸೂಚಿಸಿದ ಅವರು, ಬಳಿಕ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.ಇದಕ್ಕೂ ಮೊದಲು ಗ್ರಾಮದಲ್ಲಿ ಅರಣ್ಯ…

Read More

ತಿಕೋಟಾದಲ್ಲಿ ನಾಡ ಗೀತೆ ನೂರರ ಸಂಭ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.17: ತಿಕೋಟಾ ಪಟ್ಟಣದಲ್ಲಿ ನಾಡಗೀತೆಯ ನೂರರ ಸಂಭ್ರಮ ಕಾರ್ಯಕ್ರಮ ಹಮಿಕೊಳ್ಳಲಾಗುವುದು. ರಾಷ್ಟçಕವಿ ಕುವೆಂಪು ಅವರು ಬರೆದ ನಾಡಗೀತೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಜಿಲ್ಲಾ ಮತ್ತು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ತಿಕೋಟಾ ಆಶ್ರಯದಲ್ಲಿ ಸಾವಿರಾರು ಮಕ್ಕಳನ್ನು ಒಳಗೊಂಡು ಕಾರ್ಯಕ್ರಮ ಆಯೋಜನೆ ಮಾಡುತ್ತೇವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ಬುಧವಾರ ತಿಕೋಟಾ ಪಟ್ಟಣದ ವಿರಕ್ತಮಠದ ಸಭಾ ಭವನದಲ್ಲಿ ತಾಲೂಕಾ ಪ್ರಥಮ ಸಮ್ಮೇಳನದ ಲೆಕ್ಕಪತ್ರ ಹಾಗೂ ಮುಂದಿನ…

Read More

ತಿಕೋಟಾ-ಬಬಲೇಶ್ವರಪಟ್ಟಣ ಪಂಚಾಯತಿಗಳ ಪುನರ್ ವಿಂಗಡಣೆ ಅಧಿಸೂಚನೆ : ಆಕ್ಷೇಪಣೆಗೆ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 22: ಜಿಲ್ಲೆಯ ತಿಕೋಟಾ ಹಾಗೂ ಬಬಲೇಶ್ವರ ಪಟ್ಟಣ ಪಂಚಾಯತಿಗಳ ಪುನರ್ ವಿಂಗಡಣೆ ಮಾಡಿ, ಉಪವಿಭಾಗಾಧಿಕಾರಿಗಳು ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದು, ಈ ಅಧಿಸೂಚನೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.ಪಟ್ಟಣ ಪಂಚಾಯತಿಗಳ ಪುನರ್ ವಿಂಗಡಣೆ ಮಾಡಿ ಹೊರಡಿಸಿದ ಅಧಿಸೂಚನೆಗೆ ಏನಾದರೂ ಆಕ್ಷೇಪಣೆಗಳು ಅಥವಾ ಸಲಹೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಉಪವಿಭಾಗಾಧಿಕಾರಿಗಳು ವಿಜಯಪುರ ಇವರಿಗೆ ದಿನಾಂಕ 04-10-2025ರೊಳಗಾಗಿ ಸಲ್ಲಿಸಬಹುದಾಗಿದೆ. ನಿಗದಿತ ಅವಧಿ ಮೀರಿ ಬಂದ ಯಾವುದೇ ಸಲಹೆ ಹಾಗೂ ಆಕ್ಷೇಪಣೆಗಳನ್ನು ಪುರಸ್ಕರಿಸಲಾಗುವುದಿಲ್ಲ. ಎಲ್ಲ ಆಕ್ಷೇಪಣೆ ಹಾಗೂ ಸಲಹೆಗಳನ್ನು ಪರಿಶೀಲಿಸಿದ ನಂತರ…

Read More

ತಿಕೋಟದಲ್ಲಿ ಸೆ. 21 ರಿಂದ ಮೂರು ದಿನಗಳ ಕಾಲ ದ್ರಾಕ್ಷಿ ಬೆಳೆ ವಿಚಾರ ಸಂಕಿರಣ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 18 :ಸೆ. 21ರಿಂದ ಮೂರು ದಿನಗಳ ಕಾಲಜಿಲ್ಲೆಯ ತಿಕೋಟಾದ ಕನಕದಾಸ ಭವನದಲ್ಲಿ ರಾಜ್ಯಮಟ್ಟದ ದ್ರಾಕ್ಷಿ ವಿಚಾರ ಸಂಕಿರಣ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಪ್ರಾದೇಶಿಕ ಸಂಘದ ಅಧ್ಯಕ್ಷ ಅಭಯಕುಮಾರ ನಾಂದ್ರೇಕರ ತಿಳಿಸಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ದ್ರಾಕ್ಷಿ ಬೆಳೆಗಾರರು ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ಅನೇಕ ತೆರನಾದ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳ ನಿವಾರಣೆಗೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಬೇಕಾಗಿರುವುದು ಅಗತ್ಯವಾಗಿದೆ, ಈ ನಿಟ್ಟಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಸಮಗ್ರ ಚಿಂತನ-ಮಂಥನ ನಡೆಸಲಾಗುವುದು. ಕರ್ನಾಟಕ…

Read More

ತಿಕೋಟಾ ತಾಲೂಕಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.16: ಜಿಲ್ಲೆಯ ತಿಕೋಟಾ ತಾಲೂಕಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ. ಕೆ ಅವರು ಶನಿವಾರ ಭೇಟಿ ನೀಡಿ, ತಾಲೂಕಾ ಆಡಳಿತದ ಕಾರ್ಯ ನಿರ್ವಹಣೆಯ ಪ್ರಗತಿ ಪರಿಶೀಲನೆ ನಡೆಸಿದರು.ತಹಶೀಲ್ದಾರ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಬಾಕಿ ಕಡತಗಳ ಪರಿಶೀಲನೆ, ನ್ಯಾಯಾಲಯ ಪ್ರಕರಣಗಳ ಕಡತ, ಆಧಾರ ನೋಂದಣಿ, ಕಂದಾಯ ಗ್ರಾಮಗಳ ಮಾಹಿತಿ, ಭೂಮಿ ಪ್ರಗತಿ, ಮೋಜಣಿ ಕಡತ ಪ್ರಗತಿ ಮಾಹಿತಿ, ಪ್ರಮಾಣ ಪತ್ರಗಳ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು. ಇ ಪೌತಿ ಖಾತೆ ಪ್ರಗತಿ,…

Read More

ಬಾಬಾನಗರ ಬಳಿ ಜಲಾಶಯ ನಿರ್ಮಾಣ: ಸಚಿವ ಎಂ.ಬಿ. ಪಾಟೀಲ್

ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರ ಬಳಿ ಸುಮಾರು 400 ಎಕರೆ ಪ್ರದೇಶದಲ್ಲಿ ರೂ. 557 ಕೋ. ವೆಚ್ಚದಲ್ಲಿ 0.77 ಟಿಎಂಸಿ ಜಲಸಂಗ್ರಹ ಸಾಮರ್ಥ್ಯದ ಜಲಾಶಯ ನಿರ್ಮಿಸಲಾಗುವುದು ಎಂದು‌ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ಪಟ್ಟಣದ ಕೊರಬುಗಲ್ಲಿಯಲ್ಲಿ ಮಲಕನದೇವರಹಟ್ಟಿ ಇಟರಾಯನಗುಡಿ ಕೂಡು ರಸ್ತೆಯಿಂದ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆ ವರೆಗೆ ಅಂದಾಜು ರೂ. 495 ಲಕ್ಷ ವೆಚ್ಚದಲ್ಲಿ 5.20…

Read More