ತಿಪಟೂರಿನ ಅಕ್ಷಯ ಕಲ್ಪ ಕ್ಯಾಂಪಸ್ ತರಬೇತಿಗೆ ವಿಜಯಪುರ ರೈತರು
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 11:ಜಿಲ್ಲೆಯ ಬಬಲೇಶ್ವರ ಹಾಗೂ ತಿಕೋಟಾ ತಾಲೂಕಿನ ಆಯ್ದ 20 ಜನ ರೈತರ ತಂಡವು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿರುವ ಅಕ್ಷಯ ಕಲ್ಪ ಕ್ಯಾಂಪಸ್ಗೆ ತರಬೇತಿಗೆ ತೆರಳಿದೆ.ನಿನ್ನೆ ಬುಧವಾರ ಸಂಜೆ ತಿಪಟೂರು ಅಕ್ಷಯಕಲ್ಪ ಕ್ಯಾಂಪಸ್ ಗೆ ತೆರಳುತ್ತಿರುವ ರೈತರಿಗೆ ಶುಭಕೋರಿದ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ.ವೈ.ಎಂ.ಜಯರಾಜ ಅವರು, ವಿಜಯಪುರ ಜಿಲ್ಲೆಯಲ್ಲಿ ಸುಸ್ಥಿರ ಹೈನುಗಾರಿಕೆ ಮತ್ತು ತೋಟಗಾರಿಕೆಯನ್ನು ಉತ್ತೇಜಿಸಲು ಬಿ.ಎಲ್.ಡಿ.ಇ ಸಂಸ್ಥೆ, ಕೃಷಿಕಲ್ಪ ಫೌಂಡೇಶನ್ ಹಾಗೂ ಅಕ್ಷಯಕಲ್ಪ ಫೌಂಡೇಶನ್ಗಳ ಜಂಟಿ ಆಶ್ರಯದಲ್ಲಿ ಸಚಿವ ಎಂ.ಬಿ.ಪಾಟೀಲರ ಮಾರ್ಗದರ್ಶನದಲ್ಲಿ…


