
ವಿಜಯಪುರದಲ್ಲಿ 300 ಮೀಟರ್ ಉದ್ದದ ತಿರಂಗಾ ಯಾತ್ರೆ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 14: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 300 ಮೀ ಉದ್ದದ ಬೃಹತ್ ತಿರಂಗಾ ಯಾತ್ರೆಯನ್ನು ಗುರುವಾರ ಏರ್ಪಡಿಸಿತ್ತು.ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು “ಭಾರತ್ ಮಾತಾ ಕೀ ಜೈ” “ವಂದೇ ಮಾತರಂ” ದೇಶ ಮೊದಲು ಎನ್ನುವ ಘೋಷಣೆಗಳನ್ನು ಕೂಗುತ್ತಾ ತಿರಂಗವನ್ನು ಹಿಡಿದು ನಗರದ ಶಿವಾಜಿ ವೃತ್ತದಿಂದ ಬಸವೇಶ್ವರ ವೃತ್ತದ ಮೂಲಕ ಸಿದ್ದೇಶ್ವರ ದೇವಸ್ಥಾನದವರೆಗೆ ತಿರಂಗಾ ಯಾತ್ರೆಯಲ್ಲಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ…