
ತಿರಂಗಾ ಜನಯಾತ್ರೆ ಅಭಿಯಾನಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 12:ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಹರ್-ಘರ್ ತಿರಂಗಾ ಅಭಿಯಾನದಡಿ ಐತಿಹಾಸಿಕ ಗೋಲಗುಮ್ಮಟದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಸೈಕಲ್ ರ್ಯಾಲಿ ಹಾಗೂ ತಿರಂಗಾ ಜನಯಾತ್ರೆ ಜಿಲ್ಲಾಧಿಕಾರಿ ಕಚೇರಿಯವರೆಗೆ ಹಮ್ಮಿಕೊಳ್ಳಲಾಯಿತು.ಗೋಳಗುಮ್ಮಟ ಆವರಣದಿಂದ ನಡೆದ ಈ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ ನೀಡಿದರು.ಕಮಾಂಡೋ ಅಕಾಡೆಮಿಯ ಹಾಗೂ ನಗರದ ಸೈಕ್ಲಿಸ್ಟ್ ಅವರು ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಜಾಥಾ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನಾರಾಯಣಪ್ಪ ಕುರುಬರ, ಹಿಂದುಳಿದ ವರ್ಗಗಳ ಕಲ್ಯಾಣ…